ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾವೇರಿ | ಅಂತ್ಯಸಂಸ್ಕಾರ ಮುಗಿಸಿ ಹೊರಟಿದ್ದಾಗ ಅಪಘಾತ: ಇಬ್ಬರು ಮಹಿಳೆಯರು ಸಾವು

Published 31 ಆಗಸ್ಟ್ 2024, 14:49 IST
Last Updated 31 ಆಗಸ್ಟ್ 2024, 14:49 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಬಳಿ ಆಟೊ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತರು ದಾವಣಗೆರೆ ನಿವಾಸಿಗಳೆಂದು ಗುರುತಿಸಲಾಗಿದೆ. ಹೆಸರು ಗೊತ್ತಾಗಿಲ್ಲ. ಚಳಗೇರಿ ಗ್ರಾಮದಲ್ಲಿ ಮೃತಪಟ್ಟಿದ್ದ ಸಂಬಂಧಿಯೊಬ್ಬರ ಅಂತ್ಯಸಂಸ್ಕಾರಕ್ಕೆ ಹೋಗಿದ್ದ ಇವರಿಬ್ಬರು, ಕುಟುಂಬಸ್ಥರ ಜೊತೆ ವಾಪಸು ತಮ್ಮೂರಿಗೆ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ.

‘ಮೃತ ಮಹಿಳೆಯರು ಹಾಗೂ ಇತರರು ಆಟೊದಲ್ಲಿ ಚಳಗೇರಿ ಟೋಲ್ ಗೇಟ್‌ ಬಳಿ ತೆರಳುತ್ತಿದ್ದರು. ಇದೇ ಮಾರ್ಗದಲ್ಲಿ ಕ್ಯಾಂಟರ್ ಹೊರಟಿತ್ತು. ಎರಡೂ ವಾಹನಗಳ ನಡುವೆ ಡಿಕ್ಕಿ ಸಂಭವಿಸಿತ್ತು. ಇದರಿಂದಾಗಿ ಆಟೊ ಉರುಳಿಬಿದ್ದಿತ್ತು. ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಲ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ರಾಣೆಬೆನ್ನೂರು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT