ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

Last Updated 17 ಮಾರ್ಚ್ 2021, 16:19 IST
ಅಕ್ಷರ ಗಾತ್ರ

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಹಾನಗಲ್ ತಾಲ್ಲೂಕಿನ ಕಲ್ಲಹಕ್ಕಲ ಓಣಿಯ ಗಣೇಶ ರಮೇಶ ಮೂಡಿ ಎಂಬಾತನಿಗೆ 10 ವರ್ಷಗಳ ಕಠಿಣ ಸಜೆ ಹಾಗೂ ₹9,500 ದಂಡ ವಿಧಿಸಿ, ಮಂಗಳವಾರ ಜಿಲ್ಲಾ ಸೆಷನ್ಸ್‌ ಎಫ್.ಟಿ.ಎಸ್.ಸಿ-1 (ಪೋಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜ್ಯೋತಿಶ್ರೀ ಆದೇಶ ನೀಡಿದ್ದಾರೆ.

ಆರೋಪಿಯು ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ 2016ರ ಆಗಸ್ಟ್‌ 17ರಂದುಅಪಹರಿಸಿಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಈ ಪ್ರಕರಣ ಕುರಿತಂತೆ ಹಾನಗಲ್ ಸರ್ಕಲ್‌ ಇನ್‌ಸ್ಪೆಕ್ಟರ್‌ ಆರ್.ಎಚ್. ಕಟ್ಟಿಮನಿ ಅವರು ತನಿಖೆ ನಡೆಸಿ ಆರೋಪಿತನ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಸದರಿ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆದು, ದೋಷಾರೋಪಗಳು ರುಜುವಾತಾದ ಕಾರಣ ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಲಾಯಿತು.ಸರ್ಕಾರದ ಪರವಾಗಿ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ವಿನಾಯಕ ಎಸ್. ಪಾಟೀಲ ವಾದ ಮಂಡಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT