ಗುರುವಾರ , ಫೆಬ್ರವರಿ 27, 2020
19 °C

ಯುವತಿ ಮೇಲೆ ಆ್ಯಸಿಡ್‌ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ನಗರದ ರಾಣೆಬೆನ್ನೂರು ರಸ್ತೆಯ ಬಸ್‌ ನಿಲ್ದಾಣದ ಬಳಿ 27 ವರ್ಷದ ಯುವತಿಯ ಮೇಲೆ ಹೆಲ್ಮೆಟ್‌ ಧರಿಸಿದ ವ್ಯಕ್ತಿ ಆ್ಯಸಿಡ್‌ ಎರಚಿ ಪರಾರಿಯಾದ ಘಟನೆ ಮಂಗಳವಾರ ಮಹಿಳಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬ್ಯಾಡಗಿಯ ಗಾರ್ಮೆಂಟ್ಸ್‌ನಲ್ಲಿ ಮಾನವ ಸಂಪನ್ಮೂಲ ವಿಭಾಗದಲ್ಲಿ ಯುವತಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ದುಷ‌್ಕರ್ಮಿಗಳು ದಾಳಿ ನಡೆಸಿದ್ದಾರೆ. ಯುವತಿ ಕಿರುಚಾಡುವ ಶಬ್ದ ಕೇಳಿ ಸುತ್ತಮುತ್ತಲಿದ್ದ ಜನರು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿಯ ಮುಖದ ಬಲಭಾಗ, ಕತ್ತು, ಭುಜಗಳ ಮೇಲೆ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಇದು ಮೇಲ್ನೋಟಕ್ಕೆ ಪ್ರೇಮ ಪ್ರಕರಣದಂತೆ ಕಂಡು ಬರುತ್ತಿದೆ. ಸಂತ್ರಸ್ತೆಯ ಹೇಳಿಕೆ ಪಡೆದು ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು