ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಲೇಕಾರ ವಿರುದ್ಧ ಕ್ರಮಕ್ಕೆ ಆಗ್ರಹ

Last Updated 11 ನವೆಂಬರ್ 2020, 14:19 IST
ಅಕ್ಷರ ಗಾತ್ರ

ಹಾವೇರಿ: ಬಂಜಾರ ಸಮುದಾಯದ ಮುಖಂಡ, ಮಾಜಿ ಸಚಿವರೂ ಆದ ರುದ್ರಪ್ಪ ಲಮಾಣಿ ಅವರ ವಿರುದ್ಧ ಶಾಸಕ ನೆಹರು ಓಲೇಕಾರ ಅವರು ಮಾಡಿರುವ ಆಧಾರ ರಹಿತ ಆರೋಪ ಖಂಡನೀಯ. ಶಾಸಕರ ವಿರುದ್ಧ ಮುಖ್ಯಮಂತ್ರಿ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಆಲ್‌ ಇಂಡಿಯಾ ಬಂಜಾರ ಸೇವಾ ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು. ಲಮಾಣಿಯವರು ಕ್ರಿಮಿನಲ್‌ ಹಿನ್ನೆಲೆ ಉಳ್ಳವರಾಗಿದ್ದಾರೆ. ಸರ್ಕಾರಿ ಜಮೀನನ್ನು ಅಕ್ರಮವಾಗಿ ಕಬಳಿಸಿದ್ದಾರೆ. ಹೆಣ್ಣು ಮಕ್ಕಳ ಮಾರಾಟದಲ್ಲಿ ಪಾಲ್ಗೊಂಡಿದ್ದಾರೆ ಎಂದು ಸುಳ್ಳು ಆರೋಪಗಳನ್ನು ಶಾಸಕರು ಮಾಡಿದ್ದಾರೆ. ಶಾಸಕರ ಘನತೆಗೆ ತಕ್ಕ ನಡವಳಿಕೆಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಂಜಾರ ಸಮುದಾಯವನ್ನು ಗುರಿಯಾಗಿಸಿಕೊಂಡು, ಅವರ ಗೌರವಕ್ಕೆ ಚ್ಯುತಿ ತರುವ ಮತ್ತು ಚಾರಿತ್ರ್ಯವಧೆ ಮಾಡುವ ದುರುದ್ದೇಶವನ್ನು ಶಾಸಕರು ಹೊಂದಿದ್ದಾರೆ. ಆಧಾರ ರಹಿತ ಆರೋಪ ಮಾಡುವುದು ಶಾಸಕರಿಗೆ ಶೋಭೆ ತರುವ ವಿಷಯವಲ್ಲ ಎಂದು ಕಿಡಿಕಾರಿದರು.

ಮುಖಂಡರಾದ ಈರಪ್ಪ ಲಮಾಣಿ, ತೇಜಪ್ಪ ಲಮಾಣಿ, ಉಮಾಶಂಕರ, ಜಯರಾಮ ಮಾಳಾಪುರ, ರಮೇಶ ಎಂ.ಲಮಾಣಿ, ರಮೇಶ ಮುದ್ನಾಳ, ಕುಮಾರ ನಾಯ್ಕ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT