ಹಾವೇರಿ: ‘ಕೋವಿಡ್-19 ಸೋಂಕಿನ ಪಾಸಿಟಿವ್ ವ್ಯಕ್ತಿಗಳ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆಗೆ ಅಡ್ಡಿಪಡಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಮೊಕದ್ದಮೆ ದಾಖಲಿಸಿ’ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತಂತೆ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದ ಅವರು ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಸಂಪರ್ಕಿತರ ಪತ್ತೆ ಶೇ 100ರಷ್ಟು ಆಗಬೇಕು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಎಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್ ಎರಡನೇ ಅಲೆಯ ಪರಿಣಾಮವನ್ನು ಎದುರಿಸಲು ಎಲ್ಲರೂ ಸಿದ್ಧರಾಗಿರಬೇಕು. ಮುಂಜಾಗ್ರತಾ ಕ್ರಮವಾಗಿ ಬಸಾಪೂರ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯನ್ನು ಕೋವಿಡ್ ಆರೈಕೆ ಕೇಂದ್ರವಾಗಿ ಸಿದ್ಧಗೊಳಿಸಬೇಕು. ಸ್ಯಾನಿಟೈಸ್ ಮಾಡಿ ಅಗತ್ಯ ಬೆಡ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು ಎಂದರು.

ಕೋವಿಡ್ ಆರೈಕೆ ಕೇಂದ್ರಕ್ಕೆ ಬರುವ ರೋಗಿಗಳಿಗೆ ಗುಣಮಟ್ಟದ ಊಟದ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪೂರ್ವ ಸಿದ್ಧತೆಮಾಡಿಕೊಳ್ಳಿ. ಇಲ್ಲಿ ವಾಸವಿರುವ ವಿದ್ಯಾರ್ಥಿಗಳನ್ನು ಸ್ಥಳೀಯ ವಸತಿ ನಿಲಯಗಳಿಗೆ ಸ್ಥಳಾಂತರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಪ್ರಮಾಣ ಹೆಚ್ಚಳ ಮಾಡಬೇಕು ಹಾಗೂ ತಪಾಸಣೆ ಪ್ರಮಾಣವನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದರು.

ಗುತ್ತಲ ಮತ್ತು ಶಿಗ್ಗಾವಿಯಲ್ಲಿ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಸಂಪರ್ಕಿತರ ಪತ್ತೆಗೆ ಮುಂದಾದ ಆರೋಗ್ಯ ಇಲಾಖಾ ಕಾರ್ಯಕರ್ತರೊಂದಿಗೆ ಮನೆಯವರು ಸಹಕರಿಸಲು ನಿರಾಕರಿಸುತ್ತಿದ್ದಾರೆ. ವೈದ್ಯರೊಂದಿಗೆ ದುರ್ವತನೆ ತೋರುತ್ತಿರುವ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್. ರಾಘವೇಂದ್ರಸ್ವಾಮಿ ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಜಿಲ್ಲಾಧಿಕಾರಿ ಮಾತನಾಡಿ, ‘ಸಾರ್ವಜನಿಕರ ಆರೋಗ್ಯ ಮುಖ್ಯವಾಗಿದೆ. ಅಸಹಕಾರ ನೀಡುವ ಇಂತಹ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಿ. ಪೊಲೀಸ್ ಇಲಾಖೆಯ ನೆರವು ಪಡೆದು ದೂರು ದಾಖಲಿಸಿ, ಆ ಮನೆಯನ್ನು ‘ಕಂಟೋನ್ಮೆಂಟ್ ಜೋನ್ ಆಗಿ ನಿರ್ಬಂಧಿಸಿ’ ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್ ರೋಶನ್ ಮಾತನಾಡಿ, ‘ಕೋವಿಡ್ ಪತ್ತೆಗೆಗಾಗಿ ತಪಾಸಣೆ ಚುರುಕುಗೊಳಿಸಲು ಮೊಬೈಲ್ ಯುನಿಟ್ ಅನ್ನು ಹೆಚ್ಚಳ ಮಾಡಲಾಗಿದೆ. ಹೆಚ್ಚುವರಿಯಾಗಿ ನೀಡಲಾಗಿದೆ. ಹಿರೇಕೆರೂರು ಹಾಗೂ ಹಾನಗಲ್ ಸೇರಿದಂತೆ ಕೆಲವೆಡೆ ತಪಾಸಣೆ ನಿಗದಿತ ಗುರಿ ಸಾಧನೆಯಾಗುತ್ತಿಲ್ಲ. ಈ ಕುರಿತಂತೆ ಗಮನಹರಿಸಿ ವ್ಯಾಕ್ಸಿನ್ ಚಟುವಟಿಕೆ ಮತ್ತಷ್ಟು ಚುರುಕುಗೊಳಿಸುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.