ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯಕರ್ತರೇ ಬಿಜೆಪಿಗೆ ದೊಡ್ಡ ಶಕ್ತಿ: ಬಿ.ಸಿ. ಪಾಟೀಲ

Published 31 ಮಾರ್ಚ್ 2024, 16:10 IST
Last Updated 31 ಮಾರ್ಚ್ 2024, 16:10 IST
ಅಕ್ಷರ ಗಾತ್ರ

ಚಿಕ್ಕೇರೂರ(ಹಂಸಬಾವಿ): ಬಿಜೆಪಿಗೆ ಕಾರ್ಯಕರ್ತರೇ ದೊಡ್ಡ ಶಕ್ತಿ. ಪ್ರಧಾನಿ ನರೇಂದ್ರ ಮೋದಿಯವರ ಜನಪರ ಆಡಳಿತದ ಕಾರ್ಯವೈಖರಿಯನ್ನು ಪ್ರತೀ ಮತದಾರನಿಗೂ ಮನವರಿಕೆ ಮಾಡುವ ಮೂಲಕ ಈ ಬಾರಿ ಪ್ರತೀ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವಂತೆ ಪಕ್ಷ ಸಂಘಟನೆ ಮಾಡಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಹಿರೇಕೆರೂರ ತಾಲ್ಲೂಕಿಗೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸುತ್ತಿರುವ ಹಿನ್ನೆಯಲ್ಲಿ ಇಲ್ಲಿಗೆ ಸಮೀಪದ ಚಿಕ್ಕೇರೂರ ಗ್ರಾಮದಲ್ಲಿ ಶನಿವಾರ ರಾತ್ರಿ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಹಿರೇಕೆರೂರ ಮಂಡಲದ ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ ಮಾತನಾಡಿ, ಬಿಜೆಪಿ ಕಾರ್ಯಕರ್ತರು ಬೂತ್‌ಮಟ್ಟದಲ್ಲಿ ಉತ್ಸಾಹದಿಂದ ಪಕ್ಷ ಸಂಘಟನೆ ಮಾಡಬೇಕು. ಈ ಚುನಾವಣೆ ದೇಶದ ಇತಿಹಾಸದಲ್ಲಿ ಮಹತ್ತರ ಮೈಲುಗಲ್ಲಾಗುವಂತೆ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಅಧಿಕಾರಕ್ಕೆ ತರಲು ಪಣ ತೊಡಬೇಕು ಎಂದರು.

ಈ ವೇಳೆ ಮುಖಂಡರಾದ ದೊಡ್ಡಗೌಡ ಪಾಟೀಲ, ಎನ್.‌ ಎಂ.ಈಟೇರ, ಆರ್.‌ ಎನ್.ಗಂಗೋಳ, ಎಸ್.ಎಸ್.‌ ಪಾಟೀಲ, ಲಿಂಗರಾಜ ಚಪ್ಪರದಹಳ್ಳಿ, ರವಿಶಂಕರ ಬಾಳಿಕಾಯಿ, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT