ಬುಧವಾರ, ಏಪ್ರಿಲ್ 8, 2020
19 °C

ದೇವಾಲಯಗಳಿಗೆ ಆಡಳಿತಾಧಿಕಾರಿ ನೇಮಕ ಶೀಘ್ರ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಹಿಂದೂ ದೇವಾಲಯಗಳ ರಕ್ಷಣೆ ಹಾಗೂ ವ್ಯವಸ್ಥಿತ ನಿರ್ವಹಣೆಗಾಗಿ ಮುಂದಿನ ಒಂದೂವರೆ ತಿಂಗಳೊಳಗಾಗಿ ರಾಜ್ಯದ ಎಲ್ಲ ದೇವಾಲಯಗಳಿಗೂ ವಿವಿಧ ಹಂತದ ಅಧಿಕಾರಿಗಳನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಕ ಮಾಡಲಾಗುವುದು ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ 34 ಸಾವಿರ ದೇವಾಲಯಗಳಿವೆ. ಈ ಪೈಕಿ ಒಂದು ನೂರು ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದಲ್ಲಿ ಒಂದು ಸಾವಿರ ಎ ಮತ್ತು ಬಿ ದರ್ಜೆಯ ದೇವಾಲಯಗಳು, ಉಳಿದಂತೆ 33 ಸಾವಿರದಷ್ಟು ಸಿ ದರ್ಜೆಯ ದೇವಾಲಯಗಳಿವೆ. ಎ ದರ್ಜೆಯ ದೇವಾಲಯಗಳಿಗೆ ಉಪ ವಿಭಾಗ ಮಟ್ಟದ ಅಧಿಕಾರಿಗಳನ್ನು, ಬಿ ದರ್ಜೆಯ ದೇವಾಲಯಗಳಿಗೆ ಕಂದಾಯ ನಿರೀಕ್ಷಕ ಹಾಗೂ ಸಿ ದರ್ಜೆಯ ದೇವಾಲಯಗಳಿಗೆ ಗ್ರಾಮ ಲೆಕ್ಕಾಧಿಕಾರಿಗಳನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಕ ಮಾಡುವ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಗೋ ರಕ್ಷಣಾ ಕೇಂದ್ರ: ರಾಜ್ಯದ ಒಂದು ನೂರು ಎ ದರ್ಜೆಯ ದೇವಾಲಯಗಳಲ್ಲಿ ಗೋ ರಕ್ಷಣಾ ಕೇಂದ್ರವನ್ನು ತೆರೆಯಲಾಗುವುದು. ಜಿಲ್ಲೆಯ ಜನಪ್ರತಿನಿಧಿಗಳ ಮನವಿಯ ಮೇರೆಗೆ ಹಾವೇರಿ ಜಿಲ್ಲೆಯಲ್ಲಿಯೂ ಗೋ ರಕ್ಷಣಾ ಕೇಂದ್ರವನ್ನು ತೆರೆಯಲಾಗುವುದು. ಈ ಉದ್ದೇಶಕ್ಕಾಗಿ ಹತ್ತು ಎಕರೆ ಜಮೀನು ಗುರುತಿಸಲು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು