ಬುಧವಾರ, ಏಪ್ರಿಲ್ 21, 2021
23 °C
ಪ್ರಸಕ್ತ ವರ್ಷ 40 ವಿದ್ಯಾರ್ಥಿಗಳಿಗೆ ಅವಕಾಶ: ಡಾ.ಸಂಜಯ ಡಾಂಗೆ ಹೇಳಿಕೆ

ಬಿಎಸ್ಸಿ ನರ್ಸಿಂಗ್ ಕೋರ್ಸ್‌ಗೆ ಅನುಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ನಗರದ ಡಾಂಗೆ ಎಜುಕೇಷನ್‌ ಸೊಸೈಟಿಯ ‘ಸಂಜಯ ಡಾಂಗೆ ಕಾಲೇಜ್‌ ಆಫ್‌ ನರ್ಸಿಂಗ್‌ ಸೈನ್ಸಸ್’‌ನಲ್ಲಿ ಬಿ.ಎಸ್ಸಿ ನರ್ಸಿಂಗ್‌ ಕೋರ್ಸ್‌ ಅನ್ನು ಹೊಸದಾಗಿ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಸೊಸೈಟಿಯ ಅಧ್ಯಕ್ಷ ಡಾ.ಸಂಜಯ ಡಾಂಗೆ ತಿಳಿಸಿದರು. 

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಪ್ರಸಕ್ತ ವರ್ಷದಿಂದಲೇ 40 ಸೀಟುಗಳ ಪ್ರವೇಶದೊಂದಿಗೆ ಕೋರ್ಸ್‌ ಆರಂಭವಾಗಲಿದೆ. ಈಗಾಗಲೇ ಪ್ರವೇಶಾತಿ ಆರಂಭವಾಗಿದೆ. ಈ ಕೋರ್ಸ್‌ ಕಲಿಯಲು ಮೊದಲು ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ಹುಬ್ಬಳ್ಳಿ, ದಾವಣಗೆರೆ, ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಗೆ ಹೋಗಬೇಕಿತ್ತು. ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಕೋರ್ಸ್‌ ಆರಂಭಿಸಲಾಗಿದೆ’ ಎಂದರು. 

ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಈ ಕೋರ್ಸ್‌ಗೆ ಪ್ರವೇಶ ಪಡೆಯಬಹುದು. ಕೋರ್ಸ್‌ ಮುಗಿಸಿದವರಿಗೆ ಸರ್ಕಾರಿ ಮತ್ತು ಖಾಸಗಿ ವೈದ್ಯಕಿಯ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಾಗುತ್ತದೆ. ನುರಿತ ಉಪನ್ಯಾಸಕರು ಮತ್ತು ಮೂಲಸೌಕರ್ಯ ಕಲ್ಪಿಸಲಾಗಿದೆ. ಈಗಾಗಲೇ ಪ್ಯಾರಾ ಮೆಡಿಕಲ್‌ ಸೈನ್ಸಸ್‌ ಆರಂಭಿಸಲಾಗಿದೆ ಎಂದು ಹೇಳಿದರು. 

ಪತ್ರಿಕಾಗೋಷ್ಠಿಯಲ್ಲಿ ಲಲಿತಾ ಡಾಂಗೆ, ಸುರೇಶ ಯರಗಟ್ಟಿ, ಅಶ್ವಿನಿ ಜೈನ್‌ ಇದ್ದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು