ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡಗಿ: ಆರೋಗ್ಯ ಕಾರ್ಡ್ ನೋಂದಣಿಗೆ ಸಲಹೆ

Published 25 ನವೆಂಬರ್ 2023, 16:21 IST
Last Updated 25 ನವೆಂಬರ್ 2023, 16:21 IST
ಅಕ್ಷರ ಗಾತ್ರ

ಬ್ಯಾಡಗಿ: ಮಣಿಪಾಲ್ ಆರೋಗ್ಯ ಕಾರ್ಡ್ ಪಡೆದುಕೊಂಡವರಿಗೆ ಮಣಿಪಾಲ ಕಸ್ತೂರಬಾ ಆಸ್ಪತ್ರೆಯಲ್ಲಿ ರಿಯಾಯ್ತಿ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡಲಾಗುತ್ತದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ಮೋಹನ ಶೆಟ್ಟಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಜ್ಞ ವೈದ್ಯರು, ಅತ್ಯಾಧುನಿಕ ಉಪಕರಣಗಳಿಂದ ಮಧ್ಯಮ ಹಾಗೂ ಬಡ ವರ್ಗದ ಜನರಿಗೆ ಗರಿಷ್ಠ ಆರೋಗ್ಯ ಸೇವೆ ಒದಗಿಸುವ ಗುರಿಯೊಂದಿಗೆ ಮಣಿಪಾಲ್ ಆಸ್ಪತ್ರೆ ರಾಜ್ಯದೆಲ್ಲೆಡೆ ತನ್ನ ಶಾಖೆಗಳನ್ನು ವಿಸ್ತರಿಸಿಕೊಂಡಿದೆ. ಜನರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕೃಷ್ಣಪ್ರಸಾದ ಮಾತನಾಡಿ, ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಶೇ 25ರಷ್ಟು ಆರೋಗ್ಯ ಕಾರ್ಡ್‌ ಮೀಸಲಿಡಲಾಗಿದೆ. ಆರೋಗ್ಯ ಕಾರ್ಡ್ ಪಡೆಯಲು ಪಟ್ಟಣದಲ್ಲಿ ಬಿ.ಪಿ.ಚನ್ನಗೌಡ್ರ ಅವರನ್ನು ಸಂಪರ್ಕಿಸುವಂತೆ ಮನವಿ ಮಾಡಿದರು.

ಮಣಿಪಾಲ್ ಆಸ್ಪತ್ರೆಯ ಎಂ.ಎಸ್.ಕಾರಂತ, ಅನಿಲ ನಾಯಕ್, ಮಾಜಿ ಸೈನಿಕ ರಾಜಣ್ಣ ಹೊಸಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT