ಸೋಮವಾರ, ಸೆಪ್ಟೆಂಬರ್ 20, 2021
22 °C

‘ಪರಿಸರ ಸಂರಕ್ಷಣೆಗೆ ಮುಂದಾಗಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಗಿಡ, ಮರಗಳಿಂದ ಶುದ್ಧ ಗಾಳಿ, ಸ್ವಚ್ಛ ಪರಿಸರ ನಿರ್ಮಾಣವಾಗುತ್ತದೆ. ಶಾಲೆ, ಕಾಲೇಜು, ರಸ್ತೆ ಪಕ್ಕ ಹಾಗೂ ಕೆರೆ ಅಂಗಳದಲ್ಲಿ ಸಸಿ ನೆಟ್ಟು ಪೋಷಣೆ ಮಾಡಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ನಿರ್ದೇಶಕ ನಾಗರಾಜ ಶೆಟ್ಟಿ ಹೇಳಿದರು. 

ಬ್ಯಾಡಗಿ ತಾಲ್ಲೂಕು ಘಾಳಪೂಜಿ ಗ್ರಾಮ ಪಂಚಾಯಿತಿ ಕಾರ್ಯಾಲಯದಿಂದ ‘ನಮ್ಮೂರು ನಮ್ಮ ಕೆರೆ ಯೋಜನೆ’ಯಡಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ತಳವಾರ ಮಾತನಾಡಿ, ‘ನಿಂಗನಕಟ್ಟೆ ಕೆರೆಯಲ್ಲಿ ಸಂಪೂರ್ಣವಾಗಿ ಹೂಳೆತ್ತಿದ್ದು, ಮಳೆಯಿಂದ ಸಂಪೂರ್ಣವಾಗಿ ತುಂಬಿದೆ. ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ನಿಂತುಹೋಗಿದ್ದ ಕೊಳವೆಬಾವಿಗಳಲ್ಲಿ ನೀರು ಕಾಣಿಸಿಕೊಂಡಿದೆ’ ಎಂದರು.  

ಮಾರುತಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಚ್.ಎಚ್.‌ ಕುರುಬರ ಮಾತನಾಡಿದರು. ಕೆರೆ ಸಮಿತಿ ಅಧ್ಯಕ್ಷ ರಾಮನಗೌಡ ಶಿಡ್ರಳ್ಳಿ, ಪಿಡಿಒ ಗೌಸ್ ಮೋದಿನಸಾಬ‌ ಹಾವೇರಿ ತಾಲ್ಲೂಕಿನ ಯೋಜನಾಧಿಕಾರಿ ನಾರಾಯಣ ಜಿ., ಕೃಷಿ ಮೇಲ್ವಿಚಾರಕರು ನೇಮನಗೌಡ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು