ಉದ್ಯಮ ಸ್ಥಾಪನೆಗೆ ಸಲಹೆ: ಪ್ರಭುದೇವ

ಹಾವೇರಿ: ‘ಯುವಜನತೆ ಸ್ವ-ಉದ್ಯಮ ಸ್ಥಾಪಿಸಿ ಯಶಸ್ವಿ ಉದ್ಯಮಿಗಳಾಗುವುದರೊಂದಿಗೆ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು’ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಭುದೇವ ಹೇಳಿದರು.
ನಗರದ ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್‍ನಲ್ಲಿ ಬುಧವಾರ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಹಾಗೂ ಹಾವೇರಿ ಸಿ.ಬಿ. ಕೊಳ್ಳಿ ಪಾಲಿಟೆಕ್ನಿಕ್ ಆಶ್ರಯದಲ್ಲಿ ಆಯೋಜಿಸಲಾದ ‘ಆರು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ’ದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಬಿರಾರ್ಥಿಗಳು ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮದ ಉದ್ದೇಶವನ್ನು ಅರಿತು ಸ್ವ-ಉದ್ಯಮವನ್ನು ಸ್ಥಾಪಿಸಿದಾಗ ತರಬೇತಿ ಸಂಪೂರ್ಣವಾಗಿ ಯಶಸ್ವಿಯಾದಂತೆ ಎಂದು ಹೇಳಿದರು.
ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಚನ್ನಪ್ಪ.ಬಿ ಮಾತನಾಡಿದರು. ಶಿಬಿರಾರ್ಥಿಗಳು ತಮ್ಮ ಅನಿಸಿಕೆ ಹಂಚಿಕೊಂಡರು. ದಾವಣಗೆರೆ ಸಿಡಾಕ್ ಜಂಟಿ ನಿರ್ದೇಶಕ ಆರ್. ಪಿ. ಪಾಟೀಲ್, ಸಿಡಾಕ್ ಹಾವೇರಿ ಜಿಲ್ಲೆಯ ತರಬೇತುದಾರ ಬಸವರಾಜ ಜಿ.ಬಿ. ಇದ್ದರು. ದಿಡಾಕ್ ತರಬೇತುದಾರ ವಿಜಯಕುಮಾರ ಪಿ ಕಾರ್ಯಕ್ರಮ ನಿರೂಪಿಸಿದರು. ವೆಂಕಟೇಶ್ ಕುಲಕರ್ಣಿ ವಂದಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.