ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ | ಸೊಳ್ಳೆ ನಿಯಂತ್ರಿಸಲು ಸಲಹೆ

Last Updated 16 ಮೇ 2020, 17:48 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ ಸಹಯೋಗದಲ್ಲಿ ಶನಿವಾರ ರಾಷ್ಟ್ರೀಯ ಡೆಂಗಿದಿನ ಆಚರಿಸಲಾಯಿತು.

ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಶನಿವಾರ ರಾಷ್ಟ್ರೀಯ ಡೆಂಗಿ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಂದ್ರ ಎಂ.ದೊಡ್ಡಮನಿ ಚಾಲನೆ ನೀಡಿದರು.

‘ಸೊಳ್ಳೆಗಳ ಉತ್ಪಾದನೆ ತಡೆಯಲು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳುವುದರ ಮೂಲಕ ಡೆಂಗಿ ರೋಗವನ್ನು ನಿಯಂತ್ರಿಸಬಹುದು. ಸಮುದಾಯದಲ್ಲಿ ವಿಶೇಷವಾಗಿ ನಗರ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಾಗೂ ನಿರಂತರ ಆರೋಗ್ಯ ಶಿಕ್ಷಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿಕೊಂಡರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳಾದ ಡಾ.ಪ್ರಭಾಕರ ಕುಂದೂರ, ಡಿ.ಟಿ.ಓ ಡಾ.ನೀಲೇಶ, ಡಾ.ಜಗದೀಶ ಪಾಟೀಲ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಎಂ.ಜಯಾನಂದ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ದೇವರಾಜ ಎಸ್, ಕೀಟ ಶಾಸ್ತ್ರಜ್ಞೆ ಇಂದಿರಾ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT