ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆಗೆ ಸಿದ್ಧ, ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ: ಸಲೀಂ ಅಹ್ಮದ್

Last Updated 9 ಡಿಸೆಂಬರ್ 2018, 9:52 IST
ಅಕ್ಷರ ಗಾತ್ರ

ಹಾವೇರಿ: ‘ನಾನು, ಚುನಾವಣೆಗೆ ಸಿದ್ಧನಾಗಿದ್ದೇನೆ. ಹೈಕಮಾಂಡ್‌ ನಿರ್ಧಾರಕ್ಕೂಬದ್ಧನಾಗಿದ್ದೇನೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಲೀಂ ಅಹ್ಮದ್ ಹೇಳಿದರು.

ಕಳೆದ ಚುನಾವಣೆಯ ಫಲಿತಾಂಶವು ಈಗ ಮುಗಿದ ಅಧ್ಯಾಯ. ಅಂದು, ಪ್ರಧಾನಿ ನರೇಂದ್ರ ಮೋದಿ ಮಾತುಗಳಿಗೆ ಯುವಜನತೆ ಮರುಳಾಗಿದ್ದರು. ಆದರೆ, ಇಂದು ಮೋದಿ ಮತ್ತು ಬಿಜೆಪಿ ಬಗ್ಗೆ ಭ್ರಮನಿರಸನ ಹೊಂದಿದ್ದಾರೆ. ಹೀಗಾಗಿ, ಈ ಬಾರಿ ಕೈ ಮೇಲುಗೈ ಸಾಧಿಸಿದೆ ಎಂದು ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿದ್ದು, ಟಿಕೆಟ್ ಆಕಾಂಕ್ಷಿಗಳು ಸಹಜ. ಆದರೆ, ಟಿಕೆಟ್ ಘೋಷಣೆಯಾದ ಬಳಿಕ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದ ಅವರು, ಕ್ಷೇತ್ರದ ಸಂಸದರ ಬಗ್ಗೆಜನತೆ ನಿರ್ಧರಿಸುತ್ತಾರೆ. ನಾನೇನು ಹೇಳುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಲೋಕಸಭಾ ಚುನಾವಣೆಯಲ್ಲಿ ಪಕ್ಷವು ರಾಜ್ಯದಲ್ಲಿ 20 ಸೀಟುಗಳಲ್ಲಿ ಗೆಲ್ಲಲಿದೆ. ಅಲ್ಲದೇ, ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದ್ದು, ರಾಹುಲ್ ಗಾಂಧಿ ಪ್ರಧಾನಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.

2014ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಮಾತುಗಳಿಗೆ ಜನತೆ ಮರಳಾದರು. ಕಪ್ಪು ಹಣ ವಾಪಸ್, ಪ್ರತಿಯೊಬ್ಬರ ಖಾತೆಗೆ ₹15 ಲಕ್ಷ, ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿ ಸೇರಿದಂತೆ ಭರಪೂರ ಭರವಸೆಗಳನ್ನು ಅವರು ಅಂದು ನೀಡಿದ್ದರು. ಆದರೆ, ಕಳೆದ ನಾಲ್ಕು ವರ್ಷಗಳಲ್ಲಿ ಒಂದೂ ಬೇಡಿಕೆಯನ್ನು ಈಡೇರಿಸಿಲ್ಲ. ಇದರಿಂದ ಜನತೆಗೆ ಮೋದಿ ಮತ್ತು ಬಿಜೆಪಿ ಮೇಲಿನ ಭರವಸೆ ಇಲ್ಲದಾಗಿದೆ. ಪ್ರಧಾನಿ ಕೇವಲ ಸುಳ್ಳು–ಬೊಗಳೆ ಬಿಡುತ್ತಾರೆ ಎಂಬುದು ಮನವರಿಕೆಯಾಗಿದೆ. ಹೀಗಾಗಿ, ಮತ್ತೆ ಕಾಂಗ್ರೆಸ್‌ ಪಕ್ಷವನ್ನು ಜನತೆ ಬಯಸಿದ್ದು, ಯುವ ನಾಯಕ ರಾಹುಲ್‌ ಗಾಂಧಿ ಅವರನ್ನು ಪ್ರಧಾನಿ ಮಾಡಲಿದ್ದಾರೆ ಎಂದರು.

ಬಿಜೆಪಿ ಮತ್ತು ಮೋದಿಯ ಒಡೆದು ಆಳುವ ನೀತಿಯಿಂದ ಬೇಸತ್ತ ಸಮಾನ ಮನಸ್ಕ ಪಕ್ಷಗಳು ಒಗ್ಗೂಡುತ್ತಿವೆ. ಈ ಪೈಕಿ ಜೆಡಿಎಸ್ ವರಿಷ್ಠ ದೇವೇಗೌಡ ಸೇರಿದಂತೆ ಹಲವರು ರಾಹುಲ್‌ ಗಾಂಧಿ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ ಎಂದು ಹೇಳಿದ್ದಾರೆ. ಹೀಗಾಗಿ, ಬಿಜೆಪಿ ವಿರುದ್ಧ ನಮ್ಮ ಬಲ ಇನ್ನಷ್ಟು ಹೆಚ್ಚಿದೆ ಎಂದರು.

ಕೆಪಿಸಿಸಿ ಕಾರ್ಯದರ್ಶಿಗಳಾದ ಡಿ.ಬಸವರಾಜ, ಜಯಸಿಂಹ, ಎಸ್.ಎಫ್‌.ಎನ್. ಗಾಜೀಗೌಡ್ರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಸಿ. ಶಿಡೇನೂರ, ಮಾಜಿ ಶಾಸಕ ಮನೋಹರ ತಹಸೀಲ್ದಾರ್‌, ಬಸವರಾಜ ಪೇಲನವರ, ಶ್ರೀನಿವಾಸ ಹಳ್ಳಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT