ಅಕ್ಕಿಆಲೂರು: ಇಲ್ಲಿನ ಸಿ.ಜಿ. ಬೆಲ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಹಾನಗಲ್ನ ಉದ್ಯೋಗ ಸಮೃದ್ಧಿ ಕೇಂದ್ರದ ಆಶ್ರಯದಲ್ಲಿ ಆ. 30ರಂದು ಬೆಳಿಗ್ಗೆ 10ಕ್ಕೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು 3 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದ್ದಾರೆ.

ಭಾನುವಾರ ಮಾಧ್ಯಮ ಹೇಳಿಕೆ ನೀಡಿರುವ ಅವರು, ‘ದೇಶದ ಪ್ರತಿಷ್ಠಿತ ಕಂಪನಿಗಳಾದ ಟಾಟಾ, ಇನ್ಫೋಸಿಸ್, ಎಚ್ಡಿಎಫ್ಸಿ, ಎಕ್ಸಿಸ್, ಐಸಿಎಸ್ಸಿ ಬ್ಯಾಂಕ್ಗಳು, ಅಮೇಜಾನ್, ಮುತ್ತೂಟ್ ಫೈನಾನ್ಸ್, ಫಾಕ್ಸಿನ್, ಮಹಿಂದ್ರಾ ಸೇರಿದಂತೆ ಹಲವು ಕಂಪನಿಗಳು ಉದ್ಯೋಗಾವಕಾಶ ಕಲ್ಪಿಸುತ್ತಿವೆ. ಪಿಯುಸಿ, ಜೆಒಡಿಸಿ, ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ, ಬಿಸಿಎ, ನರ್ಸಿಂಗ್, ಐಟಿಐ, ಡಿಪ್ಲೊಮಾ, ಬಿಇ, ಬಿಇಡಿ, ಎಂಟೆಕ್ ಸೇರಿದಂತೆ ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಯುವಕ, ಯುವತಿಯರು ಮೇಳದಲ್ಲಿ ಭಾಗವಹಿಸಿ ಉದ್ಯೋಗಾವಕಾಶ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಮೇಳದಲ್ಲಿ ಭಾಗವಹಿಸಲು ಆಗಮಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳು ಹಾಗೂ ಸ್ವವಿವರ, ಅರ್ಜಿಗಳ ಕನಿಷ್ಠ 5 ಸೆಟ್ ಜೆರಾಕ್ಸ್ ಪ್ರತಿಗಳು, ಪಾಸ್ಪೋರ್ಟ್ ಸೈಜ್ ಫೋಟೊ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ನೇರವಾಗಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಸಹ ಹೆಸರು ನೋಂದಣಿ ಮಾಡಿಕೊಳ್ಳಬಹುದು. ಇಲ್ಲವೇ ನೇರವಾಗಿ ಮೇಳದಲ್ಲಿ ಪಾಲ್ಗೊಳ್ಳಬಹುದು ಎಂದು ವಿವರ ನೀಡಿರುವ ಶ್ರೀನಿವಾಸ ಮಾನೆ ಮೇಳದ ಕುರಿತು ಹೆಚ್ಚಿನ ಮಾಹಿತಿಗೆ ಪ್ರವೀಣ ಎಸ್. ಮೊ: 9901828102, ಸ್ವಾತಿ ಪಾಟೀಲ ಮೊ: 8310545734, ಗಿರೀಶ ಅಂಬಿಗೇರ ಮೊ: 6361154867 ಅಥವಾ ಡಾ.ವಿ.ಎಂ.ಕುಮ್ಮೂರ ಮೊ: 9482655395 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.