ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ ಅಕ್ಕಿಮಠದ ಜಾತ್ರಾ ಮಹೋತ್ಸವ ಇಂದಿನಿಂದ

Last Updated 20 ನವೆಂಬರ್ 2022, 6:49 IST
ಅಕ್ಷರ ಗಾತ್ರ

ಹಾವೇರಿ: ತಾಲ್ಲೂಕಿನ ಅಗಡಿ ಗ್ರಾಮದ ಸುಕ್ಷೇತ್ರ ಅಕ್ಕಿಮಠದ ಜಾತ್ರಾ ಮಹೋತ್ಸವ–2022 ನ.20 ಮತ್ತು ನ.21ರಂದು ನಡೆಯಲಿದೆ.

ಲಿಂ. ಮುಪ್ಪಯ್ಯ ಮಹಾಶಿವಯೋಗಿ ಮತ್ತು ಲಿಂ.ಚನ್ನಬಸವ ಮಹಾಶಿವಯೋಗಿಗಳ ಪುಣ್ಯ ಸ್ಮರಣೋತ್ಸವ ಅಂಗವಾಗಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಷಟಸ್ಥಲ ಧ್ವಜಾರೋಹಣ ವಿವಿಧ ಮಠಾಧೀಶರಿಂದ ಜರುಗುವುದು. ನ.20ರಂದು ಸಂಜೆ 6.45ಕ್ಕೆ ಭಜನೋತ್ಸವ ಮತ್ತು ಯುವಜನತೆಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

ಶಾಸಕ ನೆಹರು ಓಲೇಕಾರ, ಮಾಜಿ ಸಚಿವ ಬಸವರಾಜ ಶಿವಣ್ಣನವರ, ಉದ್ಯಮಿ ಪವನಕುಮಾರ ದೇಸಾಯಿ, ಎಸ್ಪಿ ಹನುಮಂತರಾಯ ಎಎಸ್ಪಿ ವಿಜಯಕುಮಾರ ಸಂತೋಷ ಪಾಲ್ಗೊಳ್ಳಲಿದ್ದಾರೆ. ಐಪಿಎಸ್‌ ಅಧಿಕಾರಿ ರವಿ ಡಿ.ಚನ್ನಣ್ಣನವರ ಅವರಿಂದ ಉಪನ್ಯಾಸ ನಡೆಯಲಿದೆ. ಭಜನಾ ಕಾರ್ಯಕ್ರಮ, ಭರತನಾಟ್ಯ, ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಹಾವೇರಿ ಗ್ರಾಮಾಂತರ ಪಿಎಸ್‌ಐ ಪ್ರಕಾಶ ಕಾಟೆ ಮತ್ತು ಗದಗ ಜಿಲ್ಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಎಚ್‌.ಬಿ.ಬ್ಯಾಡಗಿ ಅವರನ್ನು ಸನ್ಮಾನಿಸಲಾಗುವುದು.

ನ.21ರಂದು ಬೆಳಿಗ್ಗೆ 9ಕ್ಕೆ ಮುತ್ತೈದೆಯರಿಗೆ ಉಡಿತುಂಬುವ ಕಾರ್ಯಕ್ರಮ, ಬೆಳಿಗ್ಗೆ 10.30ಕ್ಕೆ ಮಹಿಳಾ ಗೋಷ್ಠಿ, ಮಧ್ಯಾಹ್ನ 12.30ಕ್ಕೆ ಉಭಯ ಶ್ರೀಗಳ ಭಾವಚಿತ್ರ ಮೆರವಣಿಗೆ ನಡೆಯಲಿದೆ ಎಂದು ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ಪ್ರಕಟಣೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT