ಹಾವೇರಿ: 'ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ' ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಗುರುವಾರದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಪೆಂಡಾಲ್ನಲ್ಲಿ ಕುಳಿತಿರುವ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

'ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ಬೆಲೆ ಏರಿಕೆ ಮಾಡಿ ಸಾಮಾಮ್ಯ ಜನರ ಬದುಕಿಗೆ ಬರೆ ಎಳೆದಿದೆ. ಬಿತ್ತನೆ ಬೀಜದ ದರವೂ ದುಬಾರಿ ಆಗಿದೆ. ಬಸ್ ಪ್ರಯಾಣ ದರವೂ ಏರಿಕೆ ಆಗಿದೆ. ಸರ್ಕಾರಿ ಆಸ್ಪತ್ರೆಗಳ ಶುಲ್ಕವೂ ದುಬಾರಿ ಆಗಿದೆ' ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದರು.

'ಕಾಂಗ್ರೆಸ್ ಸರ್ಕಾರದ ವಿರುದ್ಧ ಈಗ ಅಹೋರಾತ್ರಿ ಧರಣಿ ಆರಂಭಿಸಲಾಗಿದೆ. ರಾತ್ರಿಯೂ ಸ್ಥಳದಲ್ಲಿಯೇ ಕುಳಿತು ಪ್ರತಿಭಟನೆ ಮಾಡಲಿದ್ದೇವೆ. ಜಿಲ್ಲೆಯ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ' ಎಂದು ಹೇಳಿದರು.

ಮೈಲಾರ ಮಹದೇವಪ್ಪ ವೃತ್ತದ ಬಳಿ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಆಗದಂತೆ ಪೆಂಡಾಲ್ ಹಾಕಿಸಲಾಗಿದ್ದು, ಸ್ಥಳದಲ್ಲಿ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.