ಕಳಪೆ ಸಾಮಗ್ರಿ ವಿತರಣೆಯ ಆರೋಪ

7
ಅಂಗನವಾಡಿ: ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಪ್ರತಿಭಟನೆ

ಕಳಪೆ ಸಾಮಗ್ರಿ ವಿತರಣೆಯ ಆರೋಪ

Published:
Updated:
Deccan Herald

ಹಾವೇರಿ:
ಕಳಪೆ ಗುಣಮಟ್ಟದ ಸಾಮಗ್ರಿ ವಿತರಣೆ ಮತ್ತು ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಮುಂದೆ ಗುರುವಾರ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಯಿತು.

ಕೇಂದ್ರ ಸರ್ಕಾರದ ಸಮಗ್ರ ಶಿಶು ಅಭಿವೃದ್ಧಿ ಕಲ್ಯಾಣ ಯೋಜನೆ (ಐಸಿಡಿಸಿ)ಯು 42 ವರ್ಷಗಳನ್ನು ಪೂರೈಸಿದ್ದು, ಇದರಡಿ ದುಡಿಯುವ ಅಂಗನವಾಡಿ ಸಹಾಯಕಿಯರು ಹಾಗೂ ಕಾರ್ಯಕರ್ತೆಯರನ್ನು ಕಾಯಂಗೊಳಿಸಬೇಕು. ಯೋಜನೆಯನ್ನು ಖಾಸಗೀಕರಣಗೊಳಿಸಬಾರದು. ಕಾಯಮಾತಿ ತನಕ ನೌಕರರಿಗೆ ತಿಂಗಳಿಗೆ ಕನಿಷ್ಠ ₹18 ಸಾವಿರ ವೇತನ ನೀಡಬೇಕು ಎಂದು ಒತ್ತಾಯಿಸಿದರು. 

ಮಿನಿ ಅಂಗನವಾಡಿ ಕೇಂದ್ರಗಳಲ್ಲಿ ಸಹಾಯಕಿಯರು ಇಲ್ಲದ ಕಾರಣ ‘ಮಾತೃ ಪೂರ್ಣ’ ಯೋಜನೆ ಜಾರಿಗೆ ಅಡ್ಡಿಯಾಗಿದೆ. ಅದಕ್ಕಾಗಿ ಎಲ್ಲ ಮಿನಿ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸಬೇಕು. ಜಿಲ್ಲೆಯಲ್ಲಿ ಖಾಲಿ ಇರುವ ಶಿಶುಅಭಿವೃದ್ಧಿ ಯೋಜನಾಧಿಕಾರಿ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದರು.

ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿ ಮಾಡಬೇಕು. ಕನಿಷ್ಠ ₹ 3ಸಾವಿರ ನಿವೃತ್ತಿ ವೇತನ ನೀಡಬೇಕು. ಪಿಂಚಣಿಗೆ ಒಳಪಡದವರಿಗೆ ಕ್ರಮವಾಗಿ ₹ 3 ಹಾಗೂ ₹2 ಲಕ್ಷ ಇಡಗಂಟು ನೀಡಬೇಕು. ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

‘ಜಿಲ್ಲೆಯ ಅಂಗನವಾಡಿಗಳಿಗೆ ಕಳಪೆಮಟ್ಟದ ಅಡುಗೆ ಅನಿಲದ ಒಲೆ ಹಾಗೂ ಇತರ ಸಾಮಗ್ರಿಗಳನ್ನು ವಿತರಿಸಲಾಗಿದೆ. ಇವುಗಳನ್ನು ಕೂಡಲೇ ಹಿಂಪಡೆಯಬೇಕು. ಎಲ್‌ಕೆಜಿ ಹಾಗೂ ಯುಕೆಜಿಯನ್ನು ಅಂಗನವಾಡಿಯಲ್ಲೇ ನಡೆಸಬೇಕು ಎಂದು  ಫೆಡರೇಷನ್‌ ಜಿಲ್ಲಾ ಸಮಿತಿ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ ಆಗ್ರಹಿಸಿದರು.

ಸುನಂದಮ್ಮ ರೇವಣಕರ, ಲಲಿತಾ ನಾಗನಗೌಡ್ರ, ಜನ್ನತ್ ವಸ್ತ್ರದ, ಜಿ.ಪಿ.ಯರ್ರೇಶೀಮೆ, ಭಾರತಿ ಹಿರೇಮಠ ಇದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !