ಸೋಮವಾರ, ಸೆಪ್ಟೆಂಬರ್ 27, 2021
22 °C

ಬಸ್‌ ಚಕ್ರಕ್ಕೆ ಸಿಲುಕಿ ಅಂಗನವಾಡಿ ಕಾರ್ಯಕರ್ತೆ ಸಾವು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಣೆಬೆನ್ನೂರು: ಬೈಕ್‌ನಿಂದ ಬಿದ್ದು ಅಂಗನವಾಡಿ ಕಾರ್ಯಕರ್ತೆ ಮೃತಪಟ್ಟ ಘಟನೆ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಕಮಲಮ್ಮ ಸೋಮಶೇಖರ ನಾರಜ್ಜಿ (55) ಮೃತಪಟ್ಟವರು.

ಗ್ರಾಮದ ಸಂದೇಶ ನಾಗರಾಜ ಹಳ್ಳೇರ ಎಂಬವರು ಬೈಕ್‌ ವೇಗವಾಗಿ ಚಲಾಯಿಸಿಕೊಂಡು ಹೋಗುವಾಗ ಕುಪ್ಪೇಲೂರು ಕಡೆಯಿಂದ ಬಂದ ಸಾರಿಗೆ ಸಂಸ್ಥೆಯ ಬಸ್‌ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿ ಬೈಕ್‌ ಸಮೇತ ಬಿದ್ದಿದ್ದಾರೆ. ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಕಮಲಮ್ಮ ಕೆಳಗೆ ಬಿದ್ದು ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ವರು.

ಅವರು ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದರು. ಹಲಗೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೃಹಿಣಿ ಆತ್ಮಹತ್ಯೆ

ರಾಣೆಬೆನ್ನೂರು: ಇಲ್ಲಿನ ಪಂಪಾನಗರದ ನಿವಾಸಿ ಪ್ರಿಯಾಂಕಾ ಸ್ವೀವನ್‌ ಮೇಟಿ(22) ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ಸ್ಟೀವನ್‌ ಜೊಸೆಫ್‌ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದರು. ಗಂಡನ ಮನೆಯಲ್ಲಿ ವಾಸವಾಗಿದ್ದರು. ವರದಕ್ಷಿಣೆ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತಳ ತಾಯಿ ಲಿಂಗಸಗೂರು ತಾಲ್ಲೂಕಿನ ಬಂಗಾರಹಟ್ಟಿ ಗ್ರಾಮದ ಸುಲೋಚನಾ ದೇವರಾಜ ಬೀರನೂರ ನಗರ ಠಾಣೆಗೆ ದೂರು ಸಲ್ಲಿಸಿದ್ದಾರೆ.

ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.