ಶುಕ್ರವಾರ, ಮೇ 27, 2022
23 °C

ವೀರಭದ್ರೇಶ್ವರ, ಆಂಜನೇಯ ಸ್ವಾಮಿ ರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿಳವಳ್ಳಿ: ಸಮೀಪದ ಹುಲಗಡ್ಡಿ ಗ್ರಾಮದ ವೀರಭದ್ರೇಶ್ವರ ಹಾಗೂ ಆಂಜನೇಯ ಸ್ವಾಮಿಯ ರಥೋತ್ಸವ ಹಾಗೂ ವೀರಭದ್ರ ದೇವರ ಗುಗ್ಗಳವು ಭಾನುವಾರ ಜನಸಾಗರದ ಮಧ್ಯೆ ಅದ್ಧೂರಿಯಾಗಿ ನಡೆಯಿತು.

ವೀರಭದ್ರೇಶ್ವರ ಹಾಗೂ ಆಂಜನೇಯ ಸ್ವಾಮಿಯ ರಥೋತ್ಸವ ಹಾಗೂ ವೀರಭದ್ರದೇವರ ಗುಗ್ಗಳದಲ್ಲಿ ಹುಲಗಡ್ಡಿ ಸೇರಿದಂತೆ ಸುತ್ತಲಿನ ಗ್ರಾಮಗಳ ಜನರು ಭಾಗವಹಿಸಿದ್ದರು.

ಡೊಳ್ಳು, ಭಜನೆ, ವಾದ್ಯ, ಸಮ್ಮಾಳ, ಗುಗ್ಗಳ, ವೀರಗಾಸೆ ತಂಡಗಳು ಮೆರುಗು ತಂದವು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ರಥಕ್ಕೆ ಜನರು ಬಾಳೆಹಣ್ಣು ಮತ್ತು ಉತ್ತತ್ತಿಯನ್ನು ಎಸೆದು ಭಕ್ತಿ ಭಾವ ಮೆರೆದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು