ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡಗಿ ಮೆಣಸಿನಕಾಯಿ ಆವಕದಲ್ಲಿ ಮತ್ತೆ ಕುಸಿತ

Published 9 ಮೇ 2024, 14:02 IST
Last Updated 9 ಮೇ 2024, 14:02 IST
ಅಕ್ಷರ ಗಾತ್ರ

ಬ್ಯಾಡಗಿ: ಇಲ್ಲಿಯ ಮೆಣಸಿನಕಾಯಿ ಮಾರುಕಟ್ಟೆಗೆ ಗುರುವಾರ 13,361 ಚೀಲ (3,340 ಕ್ವಿಂಟಲ್‌) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ಮತ್ತೆ ಕುಸಿತವಾಗಿದೆ.

ಕಳೆದ ಸೋಮವಾರ ಮಾರುಕಟ್ಟೆಗೆ 22,815 ಚೀಲ (5,703 ಕ್ವಿಂಟಲ್‌) ಮೆಣಸಿನಕಾಯಿ ಆವಕವಾಗಿತ್ತು. ಗುರುವಾರ 1,753 ಲಾಟ್‌ ಮೆಣಸಿನಕಾಯಿ ಚೀಲಗಳನ್ನು ಟೆಂಡರ್‌ಗೆ ಇಡಲಾಗಿದ್ದು, ಈ ಪೈಕಿ ತೇವಾಂಶ ಹೆಚ್ಚಿರುವ ಹಾಗೂ ಗುಣಮಟ್ಟವಿಲ್ಲದ 101 ಲಾಟ್‌ಗಳಿಗೆ ಟೆಂಡರ್ ನಮೂದಿಸಿಲ್ಲ. 37 ಚೀಲ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹34,666 ರಂತೆ, ಒಂದು ಚೀಲ ಕಡ್ಡಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹28,499ರಂತೆ ಮತ್ತು ಗುಂಟೂರು ತಳಿ ₹17,609 ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿದ್ದು, ಸ್ಥಿರತೆ ಕಾಯ್ದುಕೊಂಡಿವೆ.

ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ₹29,809, ಬ್ಯಾಡಗಿ ಕಡ್ಡಿ ₹24,600 ಹಾಗೂ ಗುಂಟೂರ ತಳಿ ₹11,829ರಂತೆ ಮಾರಾಟವಾಗಿವೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು 217 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

ಗುರುವಾರದ ಮಾರುಕಟ್ಟೆ ದರ (ಪ್ರತಿ ಕ್ವಿಂಟಲ್‌ಗೆ ₹ಗಳಲ್ಲಿ)
ತಳಿ;ಕನಿಷ್ಠ;ಗರಿಷ್ಠ
ಬ್ಯಾಡಗಿ ಕಡ್ಡಿ;2,289;28,499
ಬ್ಯಾಡಗಿ ಡಬ್ಬಿ;2,909;34,666
ಗುಂಟೂರ ತಳಿ;0840;17,609

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT