ಗುರುವಾರ , ಜೂನ್ 17, 2021
22 °C

ಮೇ 25ರವರೆಗೆ ಎಪಿಎಂಸಿ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಕೊರೊನಾ ಸೋಂಕು ನಿಯಂತ್ರಣದ ಉದ್ದೇಶದಿಂದ ಜಿಲ್ಲೆಯಲ್ಲಿ ಮೇ 21ರಿಂದ 25ರವರೆಗೆ ಜಿಲ್ಲಾಧಿಕಾರಿ ಸಂಪೂರ್ಣ ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ನಗರದ ಎಪಿಂಸಿಯಲ್ಲಿನ ಎಲ್ಲ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಹಾವೇರಿ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ ತಿಳಿಸಿದ್ದಾರೆ.

ನಗರದ ಹಾನಗಲ್‌ ರಸ್ತೆಯಲ್ಲಿರುವ ಎಪಿಎಂಸಿಯ ಆವರಣದಲ್ಲಿ ನಡೆಯುವ ತರಕಾರಿ ಸಗಟು ಹರಾಜನ್ನು ಭಾನುವಾರ ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ತೆರೆಯಲು ಅವಕಾಶವಿದೆ. ಆ ಸಮಯದಲ್ಲಿ ಎಲ್ಲರೂ ಕೊರೊನಾ ಮಾರ್ಗಸೂಚಿ ಪಾಲಿಸಬೇಕು. ರೈತರು ಅಂದೇ ತಮ್ಮ ತರಕಾರಿಯನ್ನು ಹರಾಜಿಗೆ ತರಬಹುದು.

ಮೇ 21ರಿಂದ 25ರವರೆಗೆ ತರಕಾರಿ, ಕಾಳುಕಡಿ, ಜಾನುವಾರು ಮಾರುಕಟ್ಟೆಯು ಸಂಪೂರ್ಣವಾಗಿ ಸ್ಥಗಿತವಾಗಿರುತ್ತದೆ. ಜಿಲ್ಲಾಧಿಕಾರಿ ಅವರ ಮುಂದಿನ ಆದೇಶದ ನಂತರ ಎಪಿಎಂಸಿಯ ಕಾರ್ಯಚಟುವಟಿಕೆಗಳು ಆರಂಭಗೊಳ್ಳಲಿವೆ. ಅಲ್ಲಿಯವರೆಗೂ ರೈತರು, ವ್ಯಾಪಾರಸ್ಥರು ಕೊರೊನಾ ಹಿಮ್ಮೆಟ್ಟಿಸುವ ಈ ಕಾರ್ಯಕ್ಕೆ ಸಹಕರಿಸಬೇಕು ಎಂದು ವಿನಂತಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು