ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮನವಿ

Last Updated 1 ಡಿಸೆಂಬರ್ 2020, 16:00 IST
ಅಕ್ಷರ ಗಾತ್ರ

ಹಾವೇರಿ: ರಾಜ್ಯದಲ್ಲಿ ನದಾಫ/ಪಿಂಜಾರ ಜನಾಂಗವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಹಾಗೂ ಸಾಮಾಜಿಕವಾಗಿ, ರಾಜಕೀಯವಾಗಿ ತುಂಬಾ ಹಿಂದುಳಿದಿದೆ. ಈ ಜನಾಂಗದ ಸರ್ವತೋಮುಖ ಪ್ರಗತಿಗಾಗಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ‘ಕರ್ನಾಟಕ ರಾಜ್ಯ ನದಾಫ/ಪಿಂಜಾರ ಸಂಘದ ಹಾವೇರಿ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಅವರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರವು ಒಬಿಸಿ ಪಟ್ಟಿಯಲ್ಲಿ ನಮ್ಮ ಜನಾಂಗವನ್ನು ಸೇರ್ಪಡೆ ಮಾಡಿದ್ದು, ರಾಜ್ಯದಲ್ಲಿ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದಿರುವ ಕಾಯ್ದೆಯಲ್ಲಿಯೂ ಸಹ ನಮ್ಮ ಜನಾಂಗವನ್ನು ಅತ್ಯಂತ ಹಿಂದುಳಿದಿರುವ ಬಗ್ಗೆ ಗುರುತಿಸಲಾಗಿದೆ. ಅಲೆಮಾರಿ ಎಂದು ಗುರುತಿಸಿರುವ ಈ ಸಮುದಾಯದಲ್ಲಿ ಇಲ್ಲಿಯವರೆಗೂ ಒಬ್ಬ ಐಎಎಸ್ ಅಧಿಕಾರಿಯಾಗಲಿ, ಐಪಿಎಸ್ ಅಧಿಕಾರಿಯಾಗಲಿ ಆಯ್ಕೆಯಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.

ಸಂಘದ ಅಧ್ಯಕ್ಷ ಆರ್.ಜಿ.ಗುಡಗೇರಿ, ಹುಸೇನಸಾಬ ದೇವಿಹೂಸೂರ, ಎಂ.ಎಫ್.ಇಂಗಳಗಿ, ಉಪಾಧ್ಯಕ್ಷ ಮರ್ದಾನಸಾಬ ಸುಳ್ಳಳ್ಳಿ, ಕಾಸೀಂಸಾಬ್‌ ಮುಂದಿನಮನಿ, ನೂರ್‌ ಅಹಮದ್‌ ಕರ್ಜಗಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT