ಸೋಮವಾರ, ಜುಲೈ 26, 2021
22 °C

ಹಾವೇರಿ: ಶಿಕ್ಷಕರ ಹುದ್ದೆ ಭರ್ತಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಿಕೊಳ್ಳಲು ಅನುಮತಿ ನೀಡಬೇಕು ಎಂದು ಪಶ್ಚಿಮ ಪದವೀಧರ ಮತಕ್ಷೇತ್ರದ ಸಂಯೋಜಕ ವಿಕಾಸ ಸೊಪ್ಪಿನ ಅವರು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. 

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಿಕೊಳ್ಳಲು ಅನುಮತಿ ನಿರಾಕರಿಸಲಾಗಿದೆ. ಈಗಾಗಲೇ ಖಾಲಿ ಹುದ್ದೆಗಳನ್ನು ತುಂಬಿಕೊಳ್ಳಲು ಆರ್ಥಿಕ ಇಲಾಖೆ ಅನುಮತಿ ನೀಡಿದ್ದನ್ನು ಕೂಡ ತಡೆ ಹಿಡಿಯಲಾಗಿದೆ. ಬೋಧಕರ ಕೊರತೆ ವಿದ್ಯಾರ್ಥಿಗಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತದೆ. ಅವರ ಅಧ್ಯಯನಕ್ಕೆ ತೊಂದರೆಯಾಗುತ್ತದೆ. ಇದರಿಂದ ವಿಧ್ಯಾರ್ಥಿಗಳು ಉತ್ತಮ ಬೋಧನೆಯಿಂದ ವಂಚಿತರಾದಂತಾಗುತ್ತದೆ ಎಂದು ತಿಳಿಸಿದ್ದಾರೆ. 

ಶಿಕ್ಷಕರಾಗಿ, ಬೋಧಕರಾಗಿ ನೇಮಕಗೊಳ್ಳಲಿರುವ ಅಭ್ಯರ್ಥಿಗಳ ವಯೋಮಿತಿ ಪ್ರಶ್ನೆಯು ಇಲ್ಲಿದೆ. ಅನೇಕ ಅಭ್ಯರ್ಥಿಗಳು ಸರ್ಕಾರ ನಿಗದಿ ಪಡಿಸಿದ ವಯೋಮಿತಿಯ ಅಂಚಿನಲ್ಲಿದ್ದಾರೆ, ಈ ಆದೇಶ ಅಂಥವರನ್ನು ಕಾಯಂ ಆಗಿ ನೇಮಕಾತಿಯಿಂದ ವಂಚಿತರನ್ನಾಗಿಸುತ್ತದೆ. ಅನುದಾನಿತ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಅನೇಕ ಸಮಸ್ಯೆಗಳಲ್ಲಿ ಶಿಕ್ಷಕರ ಕೊರತೆ ಪ್ರಮುಖವಾಗಿದೆ. ವಿದ್ಯಾರ್ಥಿಗಳ ಹಾಜರಾತಿ ಕೊರತೆಯಿಂದ ಸಂಸ್ಥೆ ತನ್ನ ಅಸ್ತಿತ್ವ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ಹೇಳಿದ್ದಾರೆ. ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ವಿನಾಯಿತಿ ನೀಡಿ ಹುದ್ದೆಗಳನ್ನು ತುಂಬಿಕೊಳ್ಳಲು ಅನುಮತಿ ನೀಡಬೇಕು ಎಂದು ಕೋರಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು