ಗುರುವಾರ , ಸೆಪ್ಟೆಂಬರ್ 23, 2021
25 °C

ಸರ್ವಜ್ಞ ಐಕ್ಯಸ್ಥಳದ ಅಭಿವೃದ್ಧಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಟ್ಟೀಹಳ್ಳಿ: ಮಾಸೂರು ಗ್ರಾಮದ ಸರ್ವಜ್ಞ ಪ್ರಾಧಿಕಾರಕ್ಕೆ ಇದುವರೆಗೂ ಕಾಯಂ ಆಯುಕ್ತರನ್ನು ನೇಮಿಸಿಲ್ಲ, ಜತೆಗೆ ಸರ್ವಜ್ಞನ ಐಕ್ಯಸ್ಥಳದ ಅಭಿವೃದ್ಧಿಯಾಗಿಲ್ಲ। ಇಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ ಶೆಟ್ಟಿ ಬಣ)ಯ ಸದಸ್ಯರು ಹಾಗೂ ಮಾಸೂರು ಗ್ರಾಮಸ್ಥರು ಕೃಷಿ ಸಚಿವ ಬಿ.ಸಿ.ಪಾಟೀಲ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ವೇದಿಕೆಯ ಮಾಸೂರು ಗ್ರಾಮ ಘಟಕದ ಅಧ್ಯಕ್ಷ ಸಂತೋಷ ವಾಲ್ಮೀಕಿ, ತಾಲ್ಲೂಕು ಘಟಕದ ಅಧ್ಯಕ್ಷ ಕರಿಯಪ್ಪ ಕೊರವರ, ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಓಲೇಕಾರ, ಉಪಾಧ್ಯಕ್ಷ ಷಣ್ಮುಖ ಮೆಣಸಿನಹಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ಮರಾಠೆ, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಯೂಸೂಫ್ ಸೈಕಲಗಾರ, ಶಶಿಕುಮಾರ ನಾಮದೇವ, ಸಿದ್ದು ಹಿರೇಮಠ, ಮೂಕೇಶ ಬೆನಗೇರಿ, ವೀರೇಶ ಪೂಜಾರ, ರಾಜು ಹಿರೇಮಠ, ಮಂಜು ಕಲಾಲ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.