ಸೋಮವಾರ, ಸೆಪ್ಟೆಂಬರ್ 20, 2021
25 °C

‌‌‌‌‌ಹಾವೇರಿ: ನೇರ ನೇಮಕಾತಿಗೆ ಸಿಎಂಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‌‌‌‌‌ಹಾವೇರಿ: ಜಿಲ್ಲೆಯಲ್ಲಿನ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ವಾಹನ ಚಾಲಕರು, ವಾಟರ್‌ಮನ್‌ ಹಾಗೂ ಕಾವಲುಗಾರರು, ಹೆಲ್ಪರ್‌ಗಳನ್ನು ನೇರ ವೇತನಕ್ಕೆ ಒಳಪಡಿಸುವಂತೆ ಹಾಗೂ ಲಭ್ಯವಿರುವ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಲ್ಲಿ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ‘ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಹೊರಗುತ್ತಿಗೆ ನೌಕರರ ಸಂಘ’ದ ಹಾವೇರಿ ಜಿಲ್ಲಾ ಘಟಕದ ವತಿಯಿಂದ  ಮನವಿ ಸಲ್ಲಿಸಲಾಯಿತು.

ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ‘ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಕಾರ್ಮಿಕರ ವಿಷಯ ಈಗಾಗಲೇ ನನ್ನ ಗಮನದಲ್ಲಿದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುತ್ತೇನೆ’ ಎಂದು ಭರವಸೆ ನೀಡಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡರ, ರಾಜ್ಯ ಘಟಕದ ಕಾರ್ಯದರ್ಶಿ ಶ್ರೀನಿವಾಸ್, ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಪ್ಪ ಹೊಸಮನಿ, ಉಪಾಧ್ಯಕ್ಷ ಶಿವರಾಜ ಕಟ್ಟಿಮನಿ, ಕಾರ್ಯದರ್ಶಿ ಗುರುನಾಥ ಅಡಿವೆಣ್ಣನವರ, ಖಜಾಂಚಿ ರಮೇಶ ಭೋವಿ ಹಾಗೂ ಸದಸ್ಯರು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು