ರಾಣೆಬೆನ್ನೂರು: ತಾಲ್ಲೂಕಿನ ಆರೇಮಲ್ಲಾಪುರ ಗ್ರಾಮದಲ್ಲಿ ಜಗದ್ಗುರು ಪಂಚಾಚಾರ್ಯರ ಅಡ್ಡಪಲ್ಲಕ್ಕಿ ಮಹೋತ್ಸವ ಸೇವಾ ಸಮಿತಿಯಿಂದ ಪಂಚಾಚಾರ್ಯರ ಅಡ್ಡಪಲ್ಲಕ್ಕಿ ಮಹೋತ್ಸವ, ವೀರಭದ್ರೇಶ್ವರ ದೇವಸ್ಥಾನ ಗೋಪುರ ಕಳಸಾರೋಹಣ, ಕಲ್ಮೇಶ್ವರ ದೇವರ ಮರು ಪ್ರಾಣ ಪ್ರತಿಷ್ಠಾಪನೆ, ಮಾತಂಗೆಮ್ಮ ದೇವಿಯ ಮರುಪ್ರಾಣ ಪ್ರತಿಷ್ಠಾಪನೆ, ಗ್ರಾಮದಲ್ಲಿ ಕರಗಲ್ಲು ಸ್ಥಾಪನೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮಗಳು ಮೇ 7 ರಿಂದ 11 ರವರೆಗೆ ನಡೆಯಲಿವೆ. ಮೇ 11 ರವರೆಗೆ ಕಲಬುರ್ಗಿ ಶರಣ ಬಸವೇಶ್ವರ ಪುರಾಣ ಪ್ರವಚನ ಕಾರ್ಯಕ್ರಮವು ನೆಗಳೂರು ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯಲಿದೆ.

ಮೇ 7 ರಂದು ಸಂಜೆ 7 ಗಂಟೆಗೆ ಧರ್ಮ ಸಭೆ. ಮರುಶಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಹಾರಿಕಾ ಮಂಜುನಾಥ ಅವರು ‘ಯುವ ಜನಾಂಗ ಮತ್ತು ಧರ್ಮದ’ ಕುರಿತು ಉಪನ್ಯಾಸ ಮಾಡುವರು. ಮೇ 8ರಂದು ಬೆಳಿಗ್ಗೆ 9 ಗಂಟೆಗೆ ಕರಗಲ್ಲು ಸ್ಥಾಪನೆ, ಸಂಜೆ 7 ಗಂಟೆಗೆ ಧರ್ಮ ಸಭೆ, ಶ್ರೇಷ್ಠ ಜೀವನಕ್ಕೆ ಕೆಲವು ಮೌಲ್ಯಗಳು ಕುರಿತು ಉಪನ್ಯಾಸ ನಡೆಯಲಿದೆ. ಶಿರಹಟ್ಟಿ ಮತ್ತು ಬಾಲೆಹೊಸೂರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬೆಂಗಳೂರು ಹೈಕೋರ್ಟ್ ನ್ಯಾಯಮೂರ್ತಿ ಬಿಲ್ಲಪ್ಪ ವಿಶ್ರಾಂತ ಹಾಗೂ ಕರ್ನಾಟಕ ಪ್ರಾದೇಶಿಕ ಕುರುಬಗರ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಎಚ್. ಕೃಷ್ಣಮೂರ್ತಿ ಅವರು ಉಪನ್ಯಾಸ ನೀಡುವರು.

ಮೇ 9 ರಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆವರೆಗೆ ವೀರಭದ್ರೇಶ್ವರ ದೇವಸ್ಥಾನದ ಕಳಸ ಪುರ ಪ್ರವೇಶ ಕಾರ್ಯಕ್ರಮ ನಡೆಯುತ್ತದೆ. ಹೊನ್ನಾಳಿ ಹಿರೇಕಲ್ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ರಟ್ಟೀಹಳ್ಳಿ ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಐರಾವತ ಐರಣಿ ಕ್ಷೇತ್ರದ ಬಸವರಾಜದೇಶಿ ಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯೋಶೋಧಾ ವಂಟಗೋಡಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಅಂದು ಸಂಜೆ 6 ಗಂಟೆಗೆ ಶಿರಗುಪ್ಪಿ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳಿಂದ ಮಲ್ಲಗಂಬ ಪ್ರದರ್ಶನ ನಡೆಯುತ್ತದೆ.

ಮೇ 10 ರಂದು ಕಲ್ಮೇಶ್ವರ ದೇವರ ಮತ್ತು ಮಾತಂಗೆಮ್ಮದೇವಿಯ ಮರುಪ್ರಾಣ ಪ್ರತಿಷ್ಠಾಪನೆ ಹಾಗೂ ವಟುಗಳ ಲಿಂಗ ದೀಕ್ಷೆ ಕಾರ್ಯಕ್ರಮ ನಡೆಯುತ್ತದೆ. ಸಂಜೆ 7 ಗಂಟೆಗೆ ಧರ್ಮ ಸಭೆ. ಮೇ 11 ರಂದು ಜಗದ್ಗುರು ಪಂಚಾಚಾರ್ಯ ಅಡ್ಡ ಪಲ್ಲಕ್ಕಿ ಮಹೋತ್ಸವ ಹಾಗೂ ವೀರಭದ್ರೇಶ್ವರ ಗೋಪುರ ಕಳಸಾರೋಹಣ ಹಾಗೂ ಸಾಮೂಹಿಕ ಮದುವೆ ಕಾರ್ಯಕ್ರಮ ನಡೆಯುವುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-22-1486781419

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.