ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾನಗಲ್ | ವನ್ಯಪ್ರಾಣಿ ಬೇಟೆ: ಇಬ್ಬರ ಬಂಧನ

Published 18 ಮಾರ್ಚ್ 2024, 16:07 IST
Last Updated 18 ಮಾರ್ಚ್ 2024, 16:07 IST
ಅಕ್ಷರ ಗಾತ್ರ

ಹಾನಗಲ್: ತಾಲ್ಲೂಕಿನ ಕಾಡು ಭಾಗದಲ್ಲಿ ವನ್ಯ ಜೀವಿಗಳನ್ನು ಬೇಟೆ ಆಡಲು ಬಂದಿದ್ದ ಗುಂಪಿನ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ.

ಭಾನುವಾರ ರಾತ್ರಿ ತಾಲ್ಲೂಕಿನ ಹನುಮಾಪುರ ಮತ್ತು ಸರ್ಕಾರಿ ದ್ಯಾಮನಕೊಪ್ಪ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ನಡೆಸುತ್ತಿದ್ದ ವೇಳೆ ಆರೋಪಿಗಳ ವಾಹನ ಹಿಂಭಾಲಿಸಿ ದಾಳಿ ಮಾಡಿದ್ದಾರೆ.

ಈ ಸಮಯದಲ್ಲಿ ನಾಲ್ವ‌ರ ಗುಂಪಿನಲ್ಲಿ ಇಬ್ಬರು ಪರಾರಿಯಾಗಿದ್ದು, ಇಬ್ಬರನ್ನು ಸೆರೆ ಹಿಡಿಯಲಾಗಿದೆ. ಬಂಧಿತರಿಂದ ಒಂದು ಬಂದೂಕು ಮತ್ತು ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಗಿರೀಶ ಚೌಗಲೆ ತಿಳಿಸಿದ್ದಾರೆ.

ಕಾರ್ಯಾಚರಣೆ ಸಮಯದಲ್ಲಿ ಅರಣ್ಯ ಇಲಾಖೆಯ ಒಂದು ವಾಹನ ಸಂಪೂರ್ಣವಾಗಿ ಜಖಂಗೊಂಡಿದೆ. ಹಾವೇರಿ ಉಪ ಅರಣ್ಯ ಸಂರಕ್ಷನಾಧಿಕಾರಿ ಬಾಲಕೃಷ್ಣ ಎಸ್. ಮತ್ತು ಹಾನಗಲ್ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ತೋಡಕರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.
ವಲಯ ಅರಣ್ಯಾಧಿಕಾರಿ ಗಿರೀಶ ಚೌಗಲೆ, ಉಪ ವಲಯ ಅರಣ್ಯಾಧಿಕಾರಿ ಎಸ್.ಎಂ.ತಳವಾರ, ಎಸ್.ಕೆ.ರಾಥೋಡ, ಗಸ್ತು ಅರಣ್ಯ ಪಾಲಕರಾದ ಕೃಷ್ಣ ನಾಯ್ಕ, ಹನುಮಂತಪ್ಪ ಉಪ್ಪಾರ, ಫಕ್ಕೀರಪ್ಪ
ಮಲ್ಲಿಗಾರ, ರಾಮಚಂದ್ರ ಎ.ಎನ್, ಸುರೇಶ ಗೋರ್ಖಾ, ಅಶೋಕ ಮುಕಚಗಿ, ಪ್ರವೀಣ ಹುಗ್ಗೇರ ದಾಳಿಯಲ್ಲಿ ಭಾಗವಹಿಸಿದ್ದರು.

ವನ್ಯ ಪ್ರಾಣಿಗಳ ಬೇಟೆಗೆ ಶಿರಾಳಕೊಪ್ಪದಿಂದ ನಾಲ್ವರು ಬಂದಿದ್ದರು ಎಂದು ತನಿಖೆಯಿಂದ ತಿಳಿದು ಬಂದಿದ್ದು, ಇಂತಹ ಘಟನೆಗಳು ಈ ಹಿಂದೆಯೂ ನಡೆದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT