ಹಾವೇರಿ: ‘ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ಹಾಗೂ ರಾಜ್ಯ ಸರ್ಕಾರದ ಗೌರವಧನ ಸೇರಿಸಿ ಮಾಸಿಕ ₹ 15 ಸಾವಿರ ಗೌರವಧನ ನೀಡಬೇಕು’ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ್ದ ಆಶಾ ಕಾರ್ಯಕರ್ತೆಯರು, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಘೋಷಣೆ ಕೂಗಿದರು. ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

‘ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಮಾಸಿಕ ₹ 15,000 ಗೌರವಧನ ನಿಗದಿಪಡಿಸಬೇಕು. ಅಲ್ಲಿಯವರೆಗೆ, ರಾಜ್ಯ ಸರ್ಕಾರವು 2026ರ ಬಜೆಟ್ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು ₹ 5 ಸಾವಿರದಿಂದ ₹ 8 ಸಾವಿರಕ್ಕೆ ಹೆಚ್ಚಿಸುವ ಘೋಷಣೆ ಮಾಡಿ, ಜಾರಿಗೊಳಿಸಬೇಕು. ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು. ತೀವ್ರತರ ರೋಗಗಳ ಚಿಕಿತ್ಸಾ ವೆಚ್ಚಕ್ಕಾಗಿ ಕಾರ್ಪಸ್ ಫಂಡ್ ಮಾಡಿ, ಚಿಕಿತ್ಸಾ ವೆಚ್ಚ ಮರುಪಾವತಿಗೆ ವ್ಯವಸ್ಥೆ ಮಾಡಬೇಕು. ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಚೇತರಿಕೆ ಅವಧಿಯಲ್ಲಿ (3 ತಿಂಗಳು) ಮಾಸಿಕ ನಿಶ್ಚಿತ ಗೌರವಧನ ಪಾವತಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

‘ಕೇಂದ್ರದ ಮಾರ್ಗಸೂಚಿಯನ್ನು ಉಲ್ಲಂಘಿಸಿ ಆಶಾ ಕಾರ್ಯಕರ್ತೆಯರನ್ನು ತರ್ಕಬದ್ಧಗೊಳಿಸಿ ಕೈ ಬಿಡುತ್ತಿರುವ ಕ್ರಮವನ್ನು ನಿಲ್ಲಿಸಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು. ಆಶಾ ಸುಗಮಕಾರರಿಗೆ 2024– 25ರಲ್ಲಿ ಹೆಚ್ಚಳ ಆದ ಗೌರವಧನ (₹ 6,000ರಿಂದ ₹ 7,500), ಒಂದು ವರ್ಷದ ಬಾಕಿ ಮಾಸಿಕ ₹ 1,500ರಂತೆ ನೀಡಬೇಕು’ ಎಂದು ಒತ್ತಾಯಿಸಿದರು.

‘ಕೇಂದ್ರದ ಪ್ರೋತ್ಸಾಹಧನವು ಆಶಾ ಕಾರ್ಯಕರ್ತೆಯರು ಕೆಲಸ ಮಾಡಿದಷ್ಟು ಬರುತ್ತಿಲ್ಲ. ಈ ಸಮಸ್ಯೆ ಬಗೆಹರಿಸಿ, ಆಶಾಗಳಿಗೆ ಕೂಡಲೇ ಬಾಕಿ ಇರುವ ಪ್ರೋತ್ಸಾಹಧನ ನೀಡಬೇಕು. ಹಲವು ವರ್ಷಗಳಿಂದ ಬಾಕಿ ಇರುವ ವಿವಿಧ ಕಂಪೋನೆಂಟ್ಗಳ ಹಣ ಬಿಡುಗಡೆಗೊಳಿಸಬೇಕು. ರಾಜ್ಯ ಸರ್ಕಾರದ ಗ್ಯಾರಂಟಿ ಸಮೀಕ್ಷೆ ಮಾಡಿದ್ದಕ್ಕೆ ನಿಗದಿಯಾಗಿದ್ದ ₹1,000 ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದರು.

‘2025ರ ಜನವರಿಯಲ್ಲಿ ಅಹೋರಾತ್ರಿ ಹೋರಾಟ ನಡೆಸಿದಾಗ, ಮಾಸಿಕ ಗ್ಯಾರಂಟಿ ಕನಿಷ್ಠ ₹ 10,000 ಗೌರವ ಧನ ನೀಡುವ ಭರವಸೆ ನೀಡಲಾಗಿತ್ತು. ಇಲ್ಲಿಯವರೆಗೆ ಆದೇಶ ಮಾಡಿಲ್ಲ. 2025ರ ಮಾರ್ಚ್ ಬಜೆಟ್ನಲ್ಲಿ ರಾಜ್ಯ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಿದಂತೆ, ಆಶಾ ಕಾರ್ಯಕರ್ತೆಯರಿಗೂ ₹ 1,000 ಹೆಚ್ಚಳ ಮಾಡುವುದಾಗಿ ಘೋಷಿಸಲಾಗಿತ್ತು. ಈ ಭರವಸೆಯೂ ಈಡೇರಿಲ್ಲ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಜಿಲ್ಲಾ ಮಟ್ಟದ ಸಮಸ್ಯೆಗಳನ್ನು ಪರಿಹರಿಸಲು ಕುಂದುಕೊರತೆ ಸಭೆ ನಡೆಸಬೇಕು. ಆಶಾ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕು. ಈಗ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಗಿದೆ. ಬೇಡಿಕೆ ಈಡೇರಿಸದಿದ್ದರೆ, ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಮನವಿ ಸ್ವೀಕಾರ: ಜಿಲ್ಲಾ ಪಂಚಾಯಿತಿ (ಜಿ.ಪಂ) ಉಪ ಕಾರ್ಯದರ್ಶಿಯವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಆಶಾ ಕಾರ್ಯಕರ್ತೆಯರಿಂದ ಮನವಿ ಸ್ವೀಕರಿಸಿದರು. ಸಮಸ್ಯೆಗಳ ಬಗ್ಗೆ ಚರ್ಚಿಸಲು ಮಾರ್ಚ್ 6ರಂದು ಕುಂದುಕೊರತೆ ಸಭೆ ನಿಗದಿ ಮಾಡಿದ ಆದೇಶದ ಪ್ರತಿಯನ್ನು ಪ್ರತಿಭಟನಕಾರರಿಗೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.