ಶುಕ್ರವಾರ, ಜೂನ್ 18, 2021
28 °C

ಹಾವೇರಿ: ವಾಜಪೇಯಿ 'ಮೇರು ವ್ಯಕ್ತಿತ್ವದ ನಾಯಕ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ 2ನೇ ಪುಣ್ಯ ತಿಥಿಯನ್ನು ಆಚರಿಸಲಾಯಿತು. ಅಟಲ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಮುಳ್ಳೂರ ಮಾತನಾಡಿ, ‘ಬಿಜೆಪಿ ಇಂದಿನ ಸ್ಥಿತಿಗೆ ಅಂದು ಅಟಲ್ ಬಿಹಾರಿ ವಾಜಪೇಯಿ ಅವರು ಹಾಕಿದ ಭದ್ರ ಬುನಾದಿಯೇ ಕಾರಣ. ದೇಶದ ಜನರಿಗೆ ಭವ್ಯ ಭಾರತದ ಪರಿಕಲ್ಪನೆಯನ್ನು ತುಂಬಿದ್ದರಿಂದ, ಭಾರತ ಜಗತ್ತಿನ ಮುಂದೆ ಸದೃಢವಾಗಿ ನಿಲ್ಲುವಂತಾಯಿತು. ಅಪಾರ ಜ್ಞಾನ, ವಾಕ್ ಚಾತುರ್ಯದ ಮೂಲಕ ಎಲ್ಲರನ್ನೂ ಸೂಜಿಗಲ್ಲಿನಂತೆ ಸೆಳೆಯುವ ಮೇರು ವ್ಯಕ್ತಿತ್ವದ ನಾಯಕರಾಗಿದ್ದರು ಎಂದು ಗುಣಗಾನ ಮಾಡಿದರು. 

ಶಾಸಕ ನೆಹರು ಚ. ಓಲೇಕಾರ, ಹಾವೇರಿ ನಗರ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಜಿಲ್ಲಾ ಉಪಾಧ್ಯಕ್ಷ ಸೌಭಾಗ್ಯ ಹಿರೇಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ ಹೊಸಳ್ಳಿ, ಜಿಲ್ಲಾ ಕಾರ್ಯದರ್ಶಿ ಡಾ.ಸಂತೋಷ ಆಲದಕಟ್ಟಿ, ಕಾರ್ಯಾಲಯದ ಕಾರ್ಯದರ್ಶಿ ರಮೇಶ ಪಾಲನಕರ, ಜಿಲ್ಲಾ ಖಜಾಂಚಿ ಬಸವರಾಜ ಮಾಸೂರ, ಜಿಲ್ಲಾ ವಕ್ತಾರ ಪ್ರಭು ಹಿಟ್ನಳ್ಳಿ, ನಗರ ಮಂಡಲ ಅಧ್ಯಕ್ಷ ಗಿರೀಶ ತುಪ್ಪದ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಮಂಜುನಾಥ ಮಡಿವಾಳ ಇದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.