ಹಾವೇರಿ: 13 ತಂಬಾಕು ಅಂಗಡಿಗಳ ಮೇಲೆ ದಾಳಿ

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಗುರುವಾರ ಶಿಗ್ಗಾವಿ ಪಟ್ಟಣದ ವಿವಿಧ 13 ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ ಮಾಡಲಾಗಿದೆ.
ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ, ತಂಬಾಕು ಜಗಿದು ಉಗುಳುವವರ, ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆಯಡಿ ₹1200 ದಂಡ ವಸೂಲಿ ಮಾಡಲಾಗಿದೆ.
ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ.ಸಂತೋಷ ದಡ್ಡಿ, ದಾದಾಪೀರ್ ಹುಲಿಕಟ್ಟಿ, ಆಹಾರ ಸುರಕ್ಷತಾ ಅಧಿಕಾರಿ ಜಿ.ವಿ.ಕುಂದಗೋಳ ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.