ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ; ಆಕ್ರೋಶ

Published : 8 ಆಗಸ್ಟ್ 2024, 16:15 IST
Last Updated : 8 ಆಗಸ್ಟ್ 2024, 16:15 IST
ಫಾಲೋ ಮಾಡಿ
Comments

ರಾಣೆಬೆನ್ನೂರು: ‘ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಹಿಂದೂ ದೇವಸ್ಥಾನಗಳನ್ನು ಗುರಿಯಾಗಿಸಿಕಕೊಂಡು ದಾಳಿಗಳು ನಡೆಯುತ್ತಿವೆ. ಇದನ್ನು ತಡೆದು ಹಿಂದೂಗಳನ್ನು ರಕ್ಷಿಸಬೇಕು’ ಎಂದು ಒತ್ತಾಯಿಸಿ ನಗರದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ತಹಶೀಲ್ದಾರ ಆರ್‌.ಎಚ್‌. ಭಾಗವಾನ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

‘ಬಾಂಗ್ಲಾದೇಶದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಇಂಥ ಸಂದರ್ಭದಲ್ಲಿಯೇ ಹಿಂದೂಗಳ ಮೇಲೆ ದಾಳಿ ಮಾಡಲಾಗುತ್ತಿದೆ. ಕೊಲೆ, ಅತ್ಯಾಚಾರ ಪ್ರಕರಣಗಳೂ ನಡೆಯುತ್ತಿವೆ. ಅಲ್ಲಿಯ ಹಿಂದೂಗಳನ್ನು ರಕ್ಷಿಸಿ, ಸಿಎಎ ಕಾನೂನಿನ ಮೂಲಕ ಭಾರತಕ್ಕೆ ಕರೆತರಬೇಕು’ ಎಂದು ಪದಾಧಿಕಾರಿಗಳು ಆಗ್ರಹಿಸಿದರು.

ವರ್ತಕ ಬಿ.ಎನ್‌. ಪಾಟೀಲ, ಜಿ.ಜಿ.ಹೊಟ್ಟಿಗೌಡ್ರ, ನಗರಸಭೆ ಸದಸ್ಯ ನಾಗರಾಜ ಪವಾರ, ಪ್ರಭುಸ್ವಾಮಿ ಕರ್ಜಗಿಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT