ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಣೆಬೆನ್ನೂರು | ‘ಬೀದಿ ನಾಯಿ ಹಾವಳಿ ತಪ್ಪಿಸಿ’ 

Published 20 ಡಿಸೆಂಬರ್ 2023, 16:26 IST
Last Updated 20 ಡಿಸೆಂಬರ್ 2023, 16:26 IST
ಅಕ್ಷರ ಗಾತ್ರ

ರಾಣೆಬೆನ್ನೂರು: ನಗರದ ಎಂ.ಜಿ. ರಸ್ತೆ, ಸ್ಟೇಷನ್‌ ರಸ್ತೆ, ಎಪಿಎಂಸಿ, ಬಸ್‌ ನಿಲ್ದಾಣ ರಸ್ತೆ, ಮೇಡ್ಲೇರಿ ವೃತ್ತ ಮತ್ತು ಅಂಚೆ ಕಚೇರಿ ವೃತ್ತದ ಹಿಂಭಾಗ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೆಳಿಗ್ಗೆ ಬೀದಿ ನಾಯಿಗಳು ರಸ್ತೆಯ ತುಂಬಾ ಆಕ್ರಮಿಸಿಕೊಂಡಿರುತ್ತವೆ. ಬೀದಿ ನಾಯಿಗಳು ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡುವುದರಿಂದ ಬೈಕ್‌ ಸವಾರರು ಬಿದ್ದು ಕೈಕಾಲು ನೋವು ಮಾಡಿಕೊಂಡ ಘಟನೆ ನಡೆದಿವೆ.

ಆಸ್ಪತ್ರೆಗೆ ತೆರಳುವ ರೋಗಿಗಳು, ಹೊಟೇಲ್‌ ಮತ್ತು ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಜೀವ ಕೈಲಿ ಹಿಡಿದುಕೊಂಡು ಓಡಾಡುವಂತಾಗಿದೆ. ಕೂಡಲೇ ಸಂಬಂಧಿಸಿದ ಇಲಾಖೆ ಅಧಕಾರಿಗಳು ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು.

ಸುನೀಲ, ನಿವಾಸಿಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT