ಬ್ಯಾಡಗಿ: ಪಟ್ಟಣದ ಮುಖ್ಯರಸ್ತೆಯ ಮೂಲಕ ಹಾಯ್ದು ಹೋಗಿರುವ ಸೊರಬ–ಗಜೇಂದ್ರಗಡ ರಾಜ್ಯ ಹೆದ್ದಾರಿ ವಿಸ್ತರಣೆ ಕಾರ್ಯ ಪ್ರಗತಿಯಲ್ಲಿದ್ದು, ನಿಲ್ದಾಣದಿಂದ ಬಸ್ಗಳ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಕಾರಣ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಿದ್ದು, ಪಟ್ಟಣ ವ್ಯಾಪ್ತಿಯಲ್ಲಿ ನಗರ ಸಾರಿಗೆ ಆರಂಭಿಸುವಂತೆ ಸಾರ್ವಜನಿಕರು ಘಟಕದ ವ್ಯವಸ್ಥಾಪಕರಿಗೆ ಸೋಮವಾರ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಪ್ರಯಾಣಿಕ ಹೈದರಲಿ, ಪಟ್ಟಣದಲ್ಲಿ ನಗರ ಸಂಚಾರ ಬಸ್ ವ್ಯವಸ್ಥೆ ಇಲ್ಲದೆ ಸಾರ್ವಜನಿಕರು ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಹಂಸಭಾವಿ, ರಟ್ಟಿಹಳ್ಳಿ, ಹಿರೇಕೆರೂರ ಕಡೆಗೆ ಹೋಗುವ ವಾಹನಗಳು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಕಾರ್ಯಾಚರಣೆ ನಡೆಸುತ್ತಿವೆ. ರಾಣೆಬೆನ್ನೂರು, ಹರಿಹರ, ದಾವಣಗೆರೆ ಮುಂತಾದ ಕಡೆ ಹೋಗುವ ಬಸ್ಗಳು ಕದರಮಂಡಲಗಿ ರಸ್ತೆಯಿಂದ ಕಾರ್ಯಾಚರಣೆ ನಡೆಸುತ್ತಿವೆ. ಹಾವೇರಿ, ಹುಬ್ಬಳ್ಳಿ ಮತ್ತಿತರ ಕಡೆ ಹಳೆ ಪೊಲೀಸ್ ಸ್ಟೇಶನ್ ಬಳಿ ಕಾರ್ಯಾಚರಣೆ ನಡೆಸುತ್ತಿರುವುದರಿಂದ ಅಳಿಲ್ಲಂದ ಬೇರೆಡೆಗೆ ಹೋಗುವ ಪ್ರಯಾಣಿಕರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದರು.

ಪಟ್ಟಣದ ವ್ಯಾಪ್ತಿಯಲ್ಲಿ ಮೋಟೆಬೆನ್ನೂರು, ರೈಲ್ವೆ ಸ್ಟೇಶನ್ ಮುಖಾಂತರ ಪಟ್ಟಣದ ವಿವಿಧ ಬಡಾವಣೆಗಳು, ಸರ್ಕಾರಿ ಕಚೇರಿ, ತಾಲ್ಲೂಕು ಆಸ್ಪತ್ರೆ ಹಾಗೂ ವಾಣಿಜ್ಯ ಪ್ರದೇಶ ಮತ್ತು ಶಿಡೇನೂರವರೆಗೆ ಒಟ್ಟು 12 ಕಿ.ಮೀ ವ್ಯಾಪ್ತಿಯಲ್ಲಿ ನಗರ ಸಾರಿಗೆಯನ್ನು ಒಡಿಸುವುದು ಅಗತ್ಯವಾಗಿದೆ. ಇದರಿಂದ ವಯೋವೃದ್ಧರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಪ್ರತಿದಿನ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ವಿದ್ಯಾರ್ಥಿ ಮಂಜುನಾಥ ಹಂಜಗಿ ಮಾತನಾಡಿ, ಬಸ್ ನಿಲ್ದಾಣದಿಂದ ವಿವಿಧ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ರೈಲ್ವೆ ನಿಲ್ದಾಣಕ್ಕೆ ಹೋಗಲು ವಯೋವೃದ್ಧರು, ಮಹಿಳೆಯರು ಹಾಗೂ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ. ಕಾರಣ 12 ಕಿ.ಮೀ ಅಂತರದಲ್ಲಿ ನಗರ ಸಾರಿಗೆಯನ್ನು ಓಡಿಸುವಂತೆ ಮನವಿ ಮಾಡಿದರು.

ಈ ವೇಳೆ ಮಾಲತೇಶ ಆಡಿನವರ, ಮಾಲತೇಶ ಶಿಡ್ಲಣ್ಣನವರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-22-694793878

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.