ಬ್ಯಾಡಗಿ: ಪಟ್ಟಣ ಹಾಗೂ ಮೋಟೆಬೆನ್ನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆ ಹಾಗೂ ಕೆಳ ಸೇತುವೆ ಕಾಮಗಾರಿ ಕಳಪೆಯಾಗಿದ್ದು, ತನಿಖೆ ನಡೆಸಬೇಕು ಹಾಗೂ ಸ್ಥಗಿತಗೊಂಡ ವಿದ್ಯುತ್ ಸಂಪರ್ಕವನ್ನು ಆರಂಭಿಸಬೇಕು ಎಂದು ಆಗ್ರಹಿಸಿದ ಗ್ರಾಮಸ್ಥರು ಗುರುವಾರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರಿಗೆ ಮನವಿ ಸಲ್ಲಿಸಿದರು.

ವಕೀಲ ಬಸವರಾಜ ಬಳ್ಳಾರಿ ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೋಟ್ಯಾಂತರ ಅನುದಾನದಲ್ಲಿ ಮೇಲ್ಸೇತುವೆ ನಿರ್ಮಿಸಿದ್ದು, ಕಾಮಗಾರಿ ಕಳಪೆಯಾಗಿದೆ. ಈ ಕುರಿತು ಸಮಗ್ರ ತನಿಖೆ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.

ಮೇಲ್ಸೇತುವೆ ಎರಡೂ ಬದಿಯೂ ಬಿರುಕು ಬಿಟ್ಟಿದ್ದು, ಕುಸಿಯುವ ಸಾಧ್ಯತೆ ಹೆಚ್ಚಿದೆ. ಸೇತುವೆ ಎರಡು ಬದಿಯಲ್ಲಿ ಅಳವಡಿಸಿದ ಬೀದಿದೀಪಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದು, ಕತ್ತಲೆಯಲ್ಲಿಯೇ ಜನರು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.

ಮುಖಂಡರಾದ ಮಲ್ಲಿಕಾರ್ಜುನ ಬಳ್ಳಾರಿ, ಮಂಜುನಾಥ ಬೆನಕನಕೊಂಡ, ಮಲ್ಲಿಕಾರ್ಜುನ ಬೆಳವಿಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-22-802361847

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.