ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಘಟನಾತ್ಮಕ ಹೋರಾಟ ಅಗತ್ಯ: ಪಾಂಡುರಂಗ ಪಮ್ಮಾರ

Last Updated 8 ನವೆಂಬರ್ 2020, 15:49 IST
ಅಕ್ಷರ ಗಾತ್ರ

ಹಾವೇರಿ: ‘ಬಂಜಾರ ಸಮುದಾಯದ ಸಂಘಟನೆಗಾಗಿ ಹಾಗೂ ಸಮಾಜದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ಸಂಘಟನಾತ್ಮಕ ಹೋರಾಟ ಮಾಡುವ ತುರ್ತು ಅಗತ್ಯವಿದೆ’ ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ರಾಜ್ಯ ಘಟಕದ ಅಧ್ಯಕ್ಷ ಪಾಂಡುರಂಗ ಪಮ್ಮಾರ ಕರೆ ನೀಡಿದರು.

ಜಿಲ್ಲಾ ಬಂಜಾರ ಭವನದಲ್ಲಿ ಭಾನುವಾರ ಹಾವೇರಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಧ್ಯಕ್ಷರ ನೇಮಕಾತಿ ಆದೇಶ ವಿತರಣೆ ಮಾಡಿ ಅವರು ಮಾತನಾಡಿದರು.

ಮಾಜಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿ, ‘ಬಂಜಾರ ಸಮುದಾಯದ ಜನ ತಲೆ ತಲಾಂತರದಿಂದ ಕಡುಬಡತನದಲ್ಲಿ ಹುಟ್ಟಿ, ಕಷ್ಟ ಕಾರ್ಪಣ್ಯದಿಂದ ದುಡಿದು ಸ್ವಾಭಿಮಾನದ ಜೀವನ ಸಾಗಿಸುತ್ತಿದ್ದಾರೆ. ಆಧುನಿಕ ಯುಗದಲ್ಲಿ ಸಮಾಜದ ಜನರು ದುಶ್ಚಟ ಹಾಗೂ ಮೂಢನಂಬಿಕೆಗಳನ್ನು ಬಿಡಬೇಕು. ಆಧುನಿಕ ಯುಗಕ್ಕೆ ತಕ್ಕಂತೆ ನಡೆದುಕೊಳ್ಳುವಂತೆ ಸಮಾಜದ ಜನರಲ್ಲಿ ನೂತನ ಅಧ್ಯಕ್ಷರು ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ಹಾವೇರಿ ಜಿಲ್ಲಾ ವಿವಿಧ ತಾಲ್ಲೂಕು ಘಟಕಗಳ ಅಧ್ಯಕ್ಷರನ್ನು ನೇಮಕಾತಿ ಮಾಡಿ ಆದೇಶ ಪತ್ರ ನೀಡಲಾಯಿತು.
ಜಿಲ್ಲಾ ಘಟಕದ ಅಧ್ಯಕ್ಷ ಈರಪ್ಪ ಡಿ. ಲಮಾಣಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಂತೋಷ ಲಮಾಣಿ ಇದ್ದರು. ಜಿಲ್ಲಾ ಕಾರ್ಯದರ್ಶಿ ರಮೇಶ ಎಂ.ಲಮಾಣಿ ಕಾರ್ಯಕ್ರಮ ನಿರೂಪಿಸಿದರು. ವಾಸು ಲಮಾಣಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT