ಮಂಗಳವಾರ, ಆಗಸ್ಟ್ 3, 2021
26 °C

ಹಾವೇರಿ: ಸಿಬ್ಬಂದಿಗೆ ಕೋವಿಡ್‌‌-19 ದೃಢ, ಬ್ಯಾಂಕ್‌ ಬಂದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ನಗರದ ಹಳೇ ಪಿ.ಬಿ.ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‌ ಸಿಬ್ಬಂದಿಯೊಬ್ಬರಿಗೆ ಕೊರೊನಾ‌ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ, ಬುಧವಾರದಿಂದ ಮುಂದಿನ ಆದೇಶದವರೆಗೆ ಬ್ಯಾಂಕ್‌ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಪ್ರಕಟಣೆಯನ್ನು ಬಾಗಿಲ ಮೇಲೆ ಅಂಟಿಸಲಾಗಿದೆ. 

ಹಲವಾರು ಗ್ರಾಹಕರು ಬ್ಯಾಂಕ್‌ ತೆರೆಯುವ ವೇಳೆಗೆ ಬಂದಿದ್ದರು. ಆದರೆ ಬಾಗಿಲು ತೆರೆಯದ ಕಾರಣ ಕೆಲಕಾಲ ಗೊಂದಲಕ್ಕೆ ಒಳಗಾದರು. ನಂತರ ಅಲ್ಲಿನ ಸಿಬ್ಬಂದಿಯೊಬ್ಬರು ಸಿಬ್ಬಂದಿಗೆ ಕೋವಿಡ್‌ ದೃಢಗೊಂಡ ಕಾರಣ ಬ್ಯಾಂಕ್‌ ವಹಿವಾಟು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ ಮೇರೆಗೆ ಗ್ರಾಹಕರು ಹಿಂದಿರುಗಿದರು. 

ಒಂದು ವಾರದಿಂದ ಈ ಬ್ಯಾಂಕಿಗೆ ಬಂದಿದ್ದ ಗ್ರಾಹಕರಲ್ಲಿ ಕೊರೊನಾ ಸೋಂಕಿನ ಭೀತಿ ಹೆಚ್ಚಾಗಿದೆ. ಆದರೆ, ಜಿಲ್ಲಾಡಳಿತ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು