ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಸಕ ಸ್ಥಾನಕ್ಕೆ ಜೂನ್ 17ರಂದು ರಾಜೀನಾಮೆ: ಬಸವರಾಜ ಬೊಮ್ಮಾಯಿ

Published 13 ಜೂನ್ 2024, 12:27 IST
Last Updated 13 ಜೂನ್ 2024, 12:27 IST
ಅಕ್ಷರ ಗಾತ್ರ

ಹಾವೇರಿ: ‘ನನ್ನ ಶಾಸಕ ಸ್ಥಾನಕ್ಕೆ ಜೂನ್ 17ರಂದು ರಾಜೀನಾಮೆ ನೀಡಲಿದ್ದೇನೆ’ ಎಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾವಿಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜೀನಾಮೆ ಬಳಿಕ ಕ್ಷೇತ್ರದ ಉಪ ಚುನಾವಣೆ ಪ್ರಕ್ರಿಯೆ ಶುರುವಾಗಲಿದೆ’ ಎಂದರು.

‘ಸಮೀಕ್ಷೆ ನಡೆಸಿ ಜನಾಭಿಪ್ರಾಯ ಯಾರ ಪರ ಇದೆಯೋ ಅವರಿಗೆ ಬಿಜೆಪಿ ಹೈಕಮಾಂಡ್‌ನವರು ಟಿಕೆಟ್ ನೀಡಲಿದ್ದಾರೆ. ನಮ್ಮಲ್ಲೂ ಅನೇಕ ಸಮರ್ಥ ಅಭ್ಯರ್ಥಿಗಳಿದ್ದಾರೆ. ಮುಂಬರುವ ಉಪ ಚುನಾವಣೆಯಲ್ಲೂ ನಾವು ಗೆಲ್ಲಲಿದ್ದೇವೆ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT