ಬ್ಯಾಡಗಿ: ಜಾತಿ ವ್ಯವಸ್ಥೆಯಿಂದ ಸಂಪೂರ್ಣವಾಗಿ ಮುಕ್ತರಾಗಬೇಕೆಂದು 12ನೇ ಶತಮಾನದಲ್ಲಿಯೇ ಜಗಜ್ಯೋತಿ ಬಸವಣ್ಣ ಸಾಮಾಜಿಕ ಸುಧಾರಣಾ ಕ್ರಾಂತಿಯನ್ನುಂಟು ಮಾಡಿದರು ಎಂದು ತಹಶೀಲ್ದಾರ್ ಪಟ್ಟರಾಜಗೌಡ್ರ ಹೇಳಿದರು.

ಇಲ್ಲಿಯ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತ ಶುಕ್ರವಾರ ಏರ್ಪಡಿಸಿದ್ದ ಜಗಜ್ಯೋತಿ ಬಸವೇಶ್ವರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಅಂಗವಾಗಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

‘ಸಮಾಜದಲ್ಲಿದ್ದ ಲಿಂಗ ತಾರತಮ್ಯವನ್ನು ಕೊನೆಗಾಣಿಸಿ ಹೆಣ್ಣು ಮಕ್ಕಳಿಗೂ ಶಿಕ್ಷಣ ನೀಡಬೇಕೆಂದು ಪ್ರತಿಪಾದಿಸಿದ ಮಹಾನ್ ಚೇತನ ಬಸವಣ್ಣ ಹಗಲಿರುಳು ಶ್ರಮಿಸಿದ್ದಾರೆ. ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅವಳಡಿಸಿಕೊಂಡು ನಡೆಯಬೇಕು’ ಎಂದು ಹೇಳಿದರು.

ತಾ.ಪಂ ಇಒ ಕೆ.ಎಂ.ಮಲ್ಲಿಕಾರ್ಜುನ ಮಾತನಾಡಿ, ‘ಹೇಮರೆಡ್ಡಿ ಮಲ್ಲಮ್ಮ 14ನೇ ಶತಮಾನದ ಮಹಿಳಾ ಸಂತರಾಗಿದ್ದರು’ ಎಂದರು.

ಈ ವೇಳೆ ಪುರಸಭೆ ಮಾಜಿ ಅಧ್ಯಕ್ಷ ಮುರಿಗೆಪ್ಪ ಶೆಟ್ಟರ, ಮುಖಂಡರಾದ ಶಂಕರಗೌಡ ಪಾಟೀಲ, ಡಿ.ಎಚ್.ಬುಡ್ಡನಗೌಡ್ರ, ಸಂತೋಷ ಮೂಲಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ.ಕೋಟಿ, ಶಿರಸ್ತೇದಾರ ಹತ್ತಿಮತ್ತೂರು, ಶಶಿಧರಸ್ವಾಮಿ ಹಿರೇಮಠ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.