ಸೋಮವಾರ, ಜುಲೈ 26, 2021
22 °C
ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

ಆಯುಷ್‌ ವೈದ್ಯರ ಸೇವೆ ಮುಂದುವರಿಸಲು ಚರ್ಚೆ: ಗೃಹ ಸಚಿವ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಕೋವಿಡ್‌ ತುರ್ತು ಪರಿಸ್ಥಿತಿ ಯಲ್ಲಿ ಎಂ.ಬಿ.ಬಿ.ಎಸ್. ವೈದ್ಯರ ಕೊರತೆ ಬಂದಾಗ, ಆಯುಷ್ ವೈದ್ಯರು ಕಾರ್ಯನಿರ್ವಹಿಸಿದ್ದಾರೆ. ಮೂರನೇ ಅಲೆ ಎದುರಿಸಲು ಹೆಚ್ಚಿನ ವೈದ್ಯಕೀಯ ಸಿಬ್ಬಂದಿ ಅಗತ್ಯವಿದ್ದು ಆಯುಷ್ ವೈದ್ಯರನ್ನೇ ತಾತ್ವಿಕವಾಗಿ ಮುಂದುವರಿಸಲು ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ ರೂಪಾಂತರ ತಳಿಯಾದ ‘ಡೆಲ್ಟಾ ಪ್ಲಸ್’ ವೈರಸ್ ಸೋಂಕು ಹರಡದಂತೆ ಸರ್ಕಾರ ತೀವ್ರ ನಿಗಾ ವಹಿಸಿದೆ. ಈ ವೈರಸ್‍ನ ಬೇರೆ ಬೇರೆ ಪ್ರಕಾರಗಳು, ಪರಿಣಾಮ ಹಾಗೂ ಈಗಿನ ವ್ಯಾಕ್ಸಿನ್ ಬಳಕೆಗಳ ಕುರಿತಂತೆ ಅಧ್ಯಯನ ನಡೆಸಲಾಗುತ್ತಿದೆ. ಕೇಂದ್ರ ಆರೋಗ್ಯ ಇಲಾಖೆ ನೀಡುವ ಸಲಹೆಗಳನ್ನು ನಿಯಮಾವಳಿಗಳನ್ನು ಪಾಲಿಸಲಾಗುವುದು’ ಎಂದು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು