ಪ್ರಧಾನಿ ಜನ್ಮದಿನ: ವಿಶೇಷ ಪೂಜೆ
ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ನಗರದ ದೇವಸ್ಥಾನಗಳಲ್ಲಿ ಬುಧವಾರ ವಿಶೇಷ ಪೂಜೆ ಸಲ್ಲಿಸಿದರು. ನಗರದ ಹೊಸಮನಿ ಸಿದ್ಧಪ್ಪ ವೃತ್ತದಲ್ಲಿ ಸೇರಿದ್ದ ಕಾರ್ಯಕರ್ತರು ಕೇಕ್ ಕತ್ತರಿಸಿ ಪ್ರಧಾನಿ ಪರ ಘೋಷಣೆ ಕೂಗಿದರು. ಜೊತೆಗೆ ಸೇವಾ ಪಾಕ್ಷಿಕ ಅಭಿಯಾನಕ್ಕೂ ಚಾಲನೆ ನೀಡಿದರು. ಸಂಸದ ಬಸವರಾಜ ಬೊಮ್ಮಾಯಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಡಾ. ಬಸವರಾಜ ಕೇಲಗಾರ ಶೋಭಾ ನಿಸ್ಸೀಮಗೌಡ್ರ ಶಿವರಾಜ ಸಜ್ಜನರ ಗವಿಸಿದ್ದಪ್ಪ ದ್ಯಾಮಣ್ಣನವರ ಸಂತೋಷ ಆಲದಕಟ್ಟಿ ನಂಜುಂಡೇಶ ಕಳ್ಳೇರ ಪರಮೇಶ್ವರಪ್ಪ ಮೇಗಳಮನಿ ಇದ್ದರು.