ಶನಿವಾರ, ಸೆಪ್ಟೆಂಬರ್ 25, 2021
29 °C

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಗಿ ಬಂದ ಹಾದಿ ಇಂತಿದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.

ಬಸವರಾಜ ಬೊಮ್ಮಾಯಿ

ಜನನ: 28–01–1960

ಜನ್ಮಸ್ಥಳ: ಹುಬ್ಬಳ್ಳಿ

ತಂದೆ: ದಿವಂಗತ ಎಸ್‌.ಆರ್‌. ಬೊಮ್ಮಾಯಿ (ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ರಾಷ್ಟ್ರೀಯ ಜನತಾದಳದ ಅಧ್ಯಕ್ಷರು)

ತಾಯಿ: ಗಂಗಮ್ಮ ಎಸ್‌.ಬೊಮ್ಮಾಯಿ 

ಧರ್ಮಪತ್ನಿ: ಚನ್ನಮ್ಮ ಬಿ.ಬೊಮ್ಮಾಯಿ

ಮಕ್ಕಳು: ಪುತ್ರ ಭರತ, ಪುತ್ರಿ ಅದಿತಿ

ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸ: ರೋಟರಿ ಇಂಗ್ಲಿಷ್‌ ಮಾಧ್ಯಮ ಶಾಲೆ, ಹುಬ್ಬಳ್ಳಿ

ಪಿಯುಸಿ: ಪಿ.ಸಿ.ಜಾಬಿನ ವಿಜ್ಞಾನ ಮಹಾವಿದ್ಯಾಲಯ, ಹುಬ್ಬಳ್ಳಿ

ಎಂಜಿನಿಯರಿಂಗ್‌ ವಿದ್ಯಾಭ್ಯಾಸ (ಬಿ.ಇ. ಮೆಕ್ಯಾನಿಕಲ್‌): ಬಿ.ವಿ.ಭೂಮರಡ್ಡಿ ವಿಜ್ಞಾನ ತಾಂತ್ರಿಕ ಮಹಾವಿದ್ಯಾಲಯ, ಹುಬ್ಬಳ್ಳಿ

ಪ್ರಾರಂಭದ ಉದ್ಯೋಗ: ಕೈಗಾರಿಕಾ ಉದ್ಯಮಿ ಹಾಗೂ 1983ರಿಂದ 1985ರವರೆಗೆ ಪುಣೆ ಟೆಲ್ಕೋ ಕಂಪನಿಯಲ್ಲಿ ಎರಡು ವರ್ಷಗಳ ತಾಂತ್ರಿಕ ತರಬೇತಿ

ಉದ್ಯೋಗ ಸ್ಥಾಪನೆ: ಹುಬ್ಬಳ್ಳಿ ಮತ್ತು ಬೆಂಗಳೂರು

ಸಾಮಾಜಿಕ ಹಾಗೂ ರಾಜಕೀಯ ಸೇವೆ:

*ಕಾಲೇಜು ವಿದ್ಯಾಭ್ಯಾಸ ದಿನದಿಂದಲೇ ಸಾಮಾಜಿಕ ಹಾಗೂ ರಾಜಕೀಯ ಕಾರ್ಯ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ ಹಾಗೂ ಸಂಘಟನೆಗಳಿಗೆ ಸತತ ಪ್ರಯತ್ನ.

*2007ರಲ್ಲಿ ಜುಲೈನಲ್ಲಿ ಧಾರವಾಡದಿಂದ ನರಗುಂದದವರೆಗೆ 232 ಕಿ.ಮೀ. 21 ದಿನಗಳ ಕಾಲ ರೈತರೊಂದಿಗೆ ಬೃಹತ್‌ ಪಾದಯಾತ್ರೆ

* 1993ರಲ್ಲಿ ಹುಬ್ಬಳ್ಳಿ ನಗರದಲ್ಲಿ ನಡೆದ ರಾಜ್ಯ ಯುವಜನತಾ ದಳದ ಐತಿಹಾಸಿಕ ಬೃಹತ್‌ ರ‍್ಯಾಲಿಯ ಸಂಘಟನೆಯ ನೇತೃತ್ವ

* 1995ರಲ್ಲಿ ಹುಬ್ಬಳ್ಳಿ ನಗರದ ಈದ್ಗಾ ಮೈದಾನದ ಸಮಸ್ಯೆಯ ಶಾಶ್ವತ ಪರಿಹಾರ ರಾಜ್ಯ ಸರ್ಕಾರದ ಮೂಲಕ ಪ್ರಯತ್ನ/ ನೇತೃತ್ವ

ಪಕ್ಷದಲ್ಲಿ ಸ್ಥಾನ: 1995ರಲ್ಲಿ ರಾಜ್ಯದ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ರಾಜಕೀಯ ಸ್ಥಾನಮಾನ:

*1996ರಿಂದ 1997ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಜೆ.ಎಚ್‌.ಪಟೇಲ್‌ ಇವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ

* 31–12–1997 ಹಾಗೂ 04–12–2003ರಲ್ಲಿ ರಾಜ್ಯ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳಿಂದ (ಧಾರವಾಡ–ಹಾವೇರಿ–ಗದಗ) ನಡೆದ ಚುನಾವಣೆಯಲ್ಲಿ ಸತತ ಎರಡು ಬಾರಿ ವಿಧಾನ ಪರಿಷತ್ತಿಗೆ ಸದಸ್ಯರಾಗಿ ಆಯ್ಕೆ

* 22–05–2008ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭೆ ಮತಕ್ಷೇತ್ರದಿಂದ ಆಯ್ಕೆ

* ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಿ.ಎಸ್‌. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ ಹಾಗೂ ಜಗದೀಶ ಶೆಟ್ಟರ್‌ ಇವರ ಸಚಿವ ಸಂಪುಟದಲ್ಲಿ ಸತತ ಐದು ವರ್ಷಗಳವರೆಗೆ ಜಲಸಂಪನ್ಮೂಲ ಸಚಿವರಾಗಿ ಸೇವೆ. 

* ದಿನಾಂಕ–05–05–2013ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದಿಂದ ದ್ವಿತೀಯ ಬಾರಿಗೆ ಆಯ್ಕೆ

* 12–05–2018ರಂದು ನಡೆದ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದಿಂದ ತೃತೀಯ ಬಾರಿಗೆ ಆಯ್ಕೆ. ಗೃಹ ಸಚಿವರಾಗಿ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು