ಗುರುವಾರ , ಜುಲೈ 16, 2020
24 °C
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ ಜೈನ್‌ ಸೂಚನೆ

ಸಾಂಸ್ಥಿಕ ಕ್ವಾರಂಟೈನ್‌: ತೀವ್ರ ನಿಗಾವಹಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಸಾಂಸ್ಥಿಕ ಕ್ವಾರಂಟೈನ್‍ನಲ್ಲಿರುವವರನ್ನು ಅವರ ಆರೋಗ್ಯ, ವಯೋಮಾನಕ್ಕನುಗುಣವಾಗಿ ಪ್ರತ್ಯೇಕವಾಗಿಸಿ ನಿಗಾವಹಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು.

ಕೊರೊನಾ ಹರಡುವಿಕೆಯ ನಿಯಂತ್ರಣ ಕುರಿತಂತೆ ಕೋವಿಡ್ ನೋಡಲ್ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಭೆ ನಡೆಸಿದ ಅವರು ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಬರುವವರ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ತೀವ್ರ ನಿಗಾವಹಿಸಬೇಕು. ಆರೋಗ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳು ಸಮನ್ವಯ ಹಾಗೂ ಚುರುಕಿನಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಕ್ವಾರಂಟೈನ್‍ನಲ್ಲಿರುವ ಪ್ರತಿಯೊಬ್ಬರ ಹೆಲ್ತ್‌ ಪ್ರೋಪೈಲ್ ಚೆಕ್‍ಮಾಡಿ, 55ರಿಂದ 60 ವರ್ಷಕ್ಕಿಂತ ಹೆಚ್ಚು ವಯಸ್ಸಾದವರು, 10 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರು, ರಕ್ತದೊತ್ತಡ, ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು, ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾದವರನ್ನು ಕ್ವಾರಂಟೈನ್ ಕೇಂದ್ರದಲ್ಲಿ ಪ್ರತ್ಯೇಕಿಸಿ ಅವರ ಆರೋಗ್ಯ ತಪಾಸಣೆ ಸೇರಿದಂತೆ ತೀವ್ರ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಟಿಬಿ ಹಾಗೂ ಎಚ್.ಐ.ವಿ. ಸೋಂಕಿತರ ಆರೋಗ್ಯದ ಬಗ್ಗೆ ತೀವ್ರ ನಿಗಾವಹಿಸಬೇಕು. ಅವರಿಗೆ ಅವಶ್ಯವಿರುವ ಔಷಧಿಗಳನ್ನು ಮುಂಚಿತವಾಗಿ ನೀಡಬೇಕು. ಎಚ್.ಐ.ವಿ. ಕೌನ್ಸಿಲರ್‌ಗಳು ಪ್ರತಿದಿನ ದೂರವಾಣಿ ಮೂಲಕ ಎಚ್.ವಿ. ಬಾಧಿತರೊಂದಿಗೆ ಸಮಾಲೋಚನೆ ನಡೆಸಬೇಕು. ಪ್ರತಿ ಕೌನ್ಸಿಲರ್ ಕನಿಷ್ಠ 50 ಎಚ್.ಐ.ವಿ. ಬಾಧಿತರೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸಭೆಯಲ್ಲಿ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿಗಳಾದ ಡಾ.ದಿಲೀಷ್ ಶಶಿ, ಅನ್ನಪೂರ್ಣ ಮುದಕಮ್ಮನವರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಡಿಡಿಪಿಐ ಅಂದಾನೆಪ್ಪ ವಡಗೇರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಕೆ.ಹಾವನೂರ ಇದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು