ಹಾವೇರಿ: ಜಿಲ್ಲೆಯ ಮೋಟೆಬೆನ್ನೂರು ಬಳಿ ಖಾಸಗಿ ಬಸ್ ಉರುಳಿಬಿದ್ದು ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಕಾರವಾರಕ್ಕೆ ರಾಷ್ಟ್ರೀಯ ಹೆದ್ದಾರಿ ಮೂಲಕ ಹೊರಟಿದ್ದ ಖಾಸಗಿ ಕಂಪನಿಯ ಬಸ್ (ಕೆಎ 01 ಎಎಸ್ 9746) ಉರುಳಿಬಿದ್ದಿದೆ.

ಅತೀ ವೇಗವಾಗಿ ಬಸ್ ಚಲಾಯಿಸುತ್ತಿದ್ದ ಚಾಲಕನ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ.

22 ಮಂದಿ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಉರುಳಿಬಿದ್ದ ಬಸ್ಸಿನಿಂದ ಪ್ರಯಾಣಿಕರು ಒಬ್ಬೊಬ್ಬರಾಗಿ ಹೊರಗೆ ಬಂದರು. ಕೆಲವರು ಬಸ್ಸಿನಲ್ಲಿಯೇ ಸಿಲುಕಿಕೊಂಡಿದ್ದರು. ಅವರನ್ನು ಹೊರಗೆ ತೆಗೆಯಲು ಸಹ ಪ್ರಯಾಣಿಕರು ಹಾಗೂ ಸ್ಥಳೀಯರು ಪ್ರಯತ್ನಿಸಿದರು.

'ಚಾಲಕ ನಿದ್ದೆ ಮಂಪರಿನಲ್ಲಿದ್ದ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮೋಟೆಬೆನ್ನೂರು ಬಳಿಯ ಫೇಸ್ ಕಾಲೇಜು ಎದುರೇ ಬಸ್ ಉರುಳಿಬಿತ್ತು' ಎಂದು ಪ್ರಯಾಣಿಕರೊಬ್ಬರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.