ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಡುಪಲಿಯ ಎರಡು ಶಾಲೆಗೆ ಅತ್ಯುತ್ತಮ ಸೇವಾ ಪ್ರಶಸ್ತಿ

Published 10 ಮಾರ್ಚ್ 2024, 14:17 IST
Last Updated 10 ಮಾರ್ಚ್ 2024, 14:17 IST
ಅಕ್ಷರ ಗಾತ್ರ

ರಟ್ಟೀಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಹಾವೇರಿಯಿಂದ ರಟ್ಟೀಹಳ್ಳಿ ತಾಲ್ಲೂಕು ಕುಡುಪಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆ, ಹಾಗೂ ಅದೇ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆ 2023-24ರ ಅತ್ಯುತ್ತಮ ಸೇವಾ ಪ್ರಶಸ್ತಿಯನ್ನು ಪಡೆದವು.

ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವುದು, ಸ್ಥಳೀಯ ಗ್ರಾಮ ಪಂಚಾಯ್ತಿ, ತಾಲ್ಲೂಕಿನ ಜನಪ್ರತಿನಿಧಿಗಳಿಂದ ಹಾಗೂ ಶಿಕ್ಷಣ ಪ್ರೇಮಿಗಳಿಂದ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಪಡೆದುಕೊಳ್ಳುವಲ್ಲಿ ಉತ್ತಮ ಕೆಲಸ ನಿರ್ವಹಿಸಿರುವುದಕ್ಕೆ ಎರಡೂ ಶಾಲೆಗಳಿಗೆ ಪ್ರಶಸ್ತಿ ಲಭಿಸಿದ್ದು, ಶನಿವಾರ ಜಿಲ್ಲಾ ಕೆಂದ್ರ ಹಾವೇರಿಯಲ್ಲಿ ನಡೆದ ಸಮಾರಂಭದಲ್ಲಿ ಎರಡೂ ಶಾಲೆಯ ಮುಖ್ಯಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಪ್ರಶಸ್ತಿಯನ್ನು ಪಡೆದುಕೊಂಡರು.

ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಉಪಸಭಾಪತಿ ರುದ್ರಪ್ಪ ಲಮಾಣಿ, ಹಾನಗಲ್ ಶಾಸಕ ಶ್ರೀನಿವಾಸ ಮನೆ, ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಮೃತಗೌಡ ಪಾಟೀಲ, ನಗರಸಭೆಯ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT