ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚೆಕ್ ಡ್ಯಾಂ ನಿರ್ಮಾಣದಿಂದ ರೈತರಿಗೆ ಅನುಕೂಲ: ಶಾಸಕ ಬಣಕಾರ

Published 17 ಮಾರ್ಚ್ 2024, 12:17 IST
Last Updated 17 ಮಾರ್ಚ್ 2024, 12:17 IST
ಅಕ್ಷರ ಗಾತ್ರ

ರಟ್ಟೀಹಳ್ಳಿ: ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಿಸುವುದರಿಂದ ಈ ಭಾಗದ ರೈತ ಸಮುದಾಯಕ್ಕೆ ಅನುಕೂಲವಾಗಲಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ತಾಲ್ಲೂಕಿನ ಜೋಕನಾಳ ಗ್ರಾಮದ ಹತ್ತಿರ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣಕ್ಕೆ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಮಳೆಗಾಲದಲ್ಲಿ ನೀರು ನಿಂತು ಕೊಳವೆಬಾವಿಗಳ ನೀರಿನ ಮಟ್ಟ ಹೆಚ್ಚಿಸುವಲ್ಲಿ ಸಹಕಾರಿಯಾಗಲಿದೆ. ಎರಡು ಚೆಕ್ ಡ್ಯಾಂಗಳಿಂದ 79 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿದೆ. ಜನ-ಜಾನುವಾರು ಪ್ರಾಣಿ, ಪಕ್ಷಿಗಳಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಬಹುದಾಗಿದೆ ಎಂದರು.

ಬೀರಪ್ಪ ಕಚ್ಚರವಿ, ಫಕ್ಕೀರಪ್ಪ ತಮ್ಮಣ್ಣನವರ ಎಂಜಿನಿಯರ್‌ ಹಾದಿಮನಿ, ಗ್ರಾಮ ಪಂಚಾಯ್ತಿ ಸದಸ್ಯ ಬಸಪ್ಪ ತಳವಾರ, ಗುತ್ತಿಗೆದಾರ ಉದಯಶೆಟ್ಟಿ, ಬೀರೇಶ ಕರಡೆಣ್ಣನವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT