ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದಕ ವಸ್ತು: ಪೊಲೀಸರಿಂದ ಜಾಗೃತಿ

Last Updated 7 ಸೆಪ್ಟೆಂಬರ್ 2020, 15:43 IST
ಅಕ್ಷರ ಗಾತ್ರ

ಹಾವೇರಿ: ‘ಸಮಾಜಕ್ಕೆ ಮಾರಕವಾಗಿರುವ ಮಾದಕ ದ್ರವ್ಯಗಳ ಸೇವನೆ, ಮಾರಾಟದ ವಿರುದ್ಧ ಯುದ್ಧದ ಮಾದರಿಯಲ್ಲಿ ಹೋರಾಟ ಮಾಡಬೇಕಾಗಿದೆ. ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಜಾಗೃತಿ ಕಾರ್ಯಕ್ರಮಗಳ ಮೂಲಕ ಮಾದಕ ವಸ್ತುಗಳ ನಿಯಂತ್ರಣಕ್ಕೆ ಪಣತೊಟ್ಟಿದೆ’ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

‘ಮಾದಕ ವಸ್ತುಗಳ ಮೇಲೆ ಯುದ್ಧ’ ಎಂಬ ಘೋಷಣೆಯೊಂದಿಗೆ ಹಾವೇರಿ ನಗರದಲ್ಲಿ ಸೋಮವಾರ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾದ ಜಾಗೃತಿ ಬೈಕ್ ರ‍್ಯಾಲಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ ಅವರು ನಗರದ ಹೊಸಮನಿ ಸಿದ್ಧಪ್ಪ ವೃತ್ತದಲ್ಲಿ ಹಸಿರು ನಿಶಾನೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಚಾಲನೆ ನೀಡಿದರು.

ಡಿವೈಎಸ್‍ಪಿ ವಿಜಯಕುಮಾರ ಸಂತೋಷ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೈಕ್ ಹಾಗೂ ಜೀಪ್‍ಗಳಲ್ಲಿ ನಗರ ಸಂಚಾರ ಕೈಗೊಂಡು ಯುವಜನರಿಗೆ ಮಾರಕವಾಗಿರುವ ಮಾದಕ ವಸ್ತುಗಳ ಸೇವನೆಯನ್ನು ಕೈಬಿಡಿ-ಮಾದಕ ವಸ್ತುಗಳ ಪತ್ತೆಗಾಗಿ ಪೊಲೀಸರೊಂದಿಗೆ ಕೈಜೋಡಿಸಿ ಎಂಬ ಘೋಷವಾಕ್ಯಗೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು.

ಕೋವಿಡ್-19 ಸೋಂಕು ತಡೆಗೆ ಕಡ್ಡಾಯವಾಗಿ ಸಾರ್ವಜನಿಕವಾಗಿ ಓಡಾಡುವಾಗ ಮಾಸ್ಕ್‌ ಧರಿಸಬೇಕು, ಅಂತರ ಕಾಯ್ದುಕೊಳ್ಳಬೇಕು. ನಿಯಮಿತವಾಗಿ ಕೈ-ಬಾಯಿ ಸ್ವಚ್ಛತೆ ಹಾಗೂ ಸ್ಯಾನಿಟೈಸರ್ ಮಾಡಿಕೊಳ್ಳುವಂತೆ ಅರಿವು ಮೂಡಿಸಿದರು. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ರಕ್ಷಣೆಗಾಗಿ ಪೊಲೀಸರ ಸಂಪರ್ಕಕ್ಕಾಗಿ ಹೊಸದಾಗಿ ಜಾರಿಗೆ ಬಂದಿರುವ 112 ಸಹಾಯವಾಣಿ ಸಂಖ್ಯೆ ಕುರಿತಂತೆ ಈ ಸಂದರ್ಭದಲ್ಲಿ ಪ್ರಚಾರ ಕೈಗೊಂಡರು.

ಜಾಥಾದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ಮಂಜಣ್ಣ ಟಿ., ಕಾವ್ಯಾ ಕೆ., ಸಬ್ ಇನ್‌ಸ್ಪೆಕ್ಟರ್‌ ಮಂಜುನಾಥ ಬಿ.ಎನ್. ಇತರ ಠಾಣಾಧಿಕಾರಿಗಳು, ಮುಖ್ಯ ಪೊಲೀಸ್ ಕಾನ್‍ಸ್ಟೆಬಲ್‌ಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT