ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಲಕ್ಷಕ್ಕೂ ಹೆಚ್ಚು ಮಹಿಳಾ ಸದಸ್ಯತ್ವದ ಗುರಿ’

Published : 14 ಸೆಪ್ಟೆಂಬರ್ 2024, 15:25 IST
Last Updated : 14 ಸೆಪ್ಟೆಂಬರ್ 2024, 15:25 IST
ಫಾಲೋ ಮಾಡಿ
Comments

ಹಿರೇಕೆರೂರು: ರಟ್ಟೀಹಳ್ಳಿ ಹಾಗೂ ಹಿರೇಕೆರೂರು ತಾಲ್ಲೂಕಿನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಹಿಳೆಯರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಸೃಷ್ಟಿ ಪಾಟೀಲ ಹೇಳಿದರು.

ತಾಲ್ಲೂಕಿನ ಬಾಳಂಬೀಡ ಗ್ರಾಮದ ಬಿ.ಸಿ.ಪಾಟೀಲ ನಿವಾಸದಲ್ಲಿ ಶನಿವಾರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಆಯೋಜಿಸಿದ ಬಿಜೆಪಿ ಸದಸ್ಯತ್ವ ಅಭಿಯಾನದ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಾಲ್ಲೂಕು, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಸದಸ್ಯತ್ವ ಅಭಿಯಾನದ ಬಗ್ಗೆ ಜನ ಜಾಗೃತಿ ಮೂಡಿಸಲಾಗುವುದು. ಪಕ್ಷದ ಎಲ್ಲ ಕಾರ್ಯಕರ್ತರು ನಿಮ್ಮ ಗ್ರಾಮದಲ್ಲಿ ಇರುವ ಮಹಿಳೆಯರಿಗೆ ಮೊಬೈಲ್ ಸಂಖ್ಯೆ 8800002024 ಗೆ ಮಿಸ್ ಕಾಲ್ ನೀಡುವ ಮೂಲಕ ಪಕ್ಷದ ಸದಸ್ಯತ್ವ ನೋಂದಣಿ ಮಾಡಿಸಬೇಕು. ಸದೃಢ ರಾಷ್ಟ್ರ ಕಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾವೆಲ್ಲರೂ ಕೈಜೋಡಿಸಬೇಕು ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆ ಕುರಿತು ಮೋರ್ಚಾ ಕಾರ್ಯಕರ್ತೆಯರು ಮಹಿಳೆಯರಲ್ಲಿ ಅರಿವು ಮೂಡಿಸಬೇಕು ಎಂದರು.

ಮಾಜಿ ಸಚಿವ ಬಿ.ಸಿ.ಪಾಟೀಲ ಮಾತನಾಡಿ, ಸೆ.2 ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಾರಂಭವಾಗಿದ್ದು, ಮಹಿಳಾ ಮೋರ್ಚಾದ ಪದಾಧಿಕಾರಿಗಳು ತಮ್ಮ, ತಮ್ಮ ಬೂತ್ ಗಳಲ್ಲಿ ಅಧ್ಯಕ್ಷರ ಜೊತೆಗೂಡಿ ಅತೀ ಹೆಚ್ಚು ಸದಸ್ಯತ್ವ ಮಾಡಿಸುವ ಮೂಲಕ ಪಕ್ಷಕ್ಕೆ ಹೆಚ್ಚಿನ ಮಹಿಳಾ ಬಲ ದೊರೆಯುವಂತೆ ಮಾಡಬೇಕು ಎಂದರು.

ತಾಲ್ಲೂಕು ಘಟಕದ ಅಧ್ಯಕ್ಷ ಶಿವಕುಮಾರ್ ತಿಪ್ಪಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಲಿತ ಗುಂಡೇನಳ್ಳಿ, ಭಾರತಿ ಕರ್ಜಿಗಿ, ಯಶೋಧಾ ಪಾಟೀಲ, ವಿದ್ಯಾ ಶೆಟ್ಟಿ, ಇಂದಿರಾ ಗೋವಿಂದಗೌಡ್ರ, ಗೀತಾ ದಂಡಗಿಹಳ್ಳಿ, ಬಸಮ್ಮ ಅಬಲೂರು, ಕುಸುಮ ಬಣಕಾರ, ಮಧು ಪಾಟೀಲ, ಮಂಜುಳಾ ಬಾಳಿಕಾಯಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT