ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇರ ಪಕ್ಷದ ಶಾಸಕರ ನೆರವು ಬಿಜೆಪಿಗೆ ಅಗತ್ಯವಿಲ್ಲ: ಬಿ.ಸಿ.ಪಾಟೀಲ

ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿಕೆ
Last Updated 15 ಫೆಬ್ರುವರಿ 2021, 13:13 IST
ಅಕ್ಷರ ಗಾತ್ರ

ಹಿರೇಕೆರೂರು (ಹಾವೇರಿ): ‘ಬೇರೆ ಪಕ್ಷದ ಶಾಸಕರು ಬಿಜೆಪಿಗೆ ಬರುವ ಅವಶ್ಯವಿಲ್ಲ. ಈಗಾಗಲೇ 119 ಶಾಸಕರು ಇದ್ದೇವೆ. ಈಗ ನಡೆಯಲಿರುವ ಮೂರು ಕ್ಷೇತ್ರಗಳ ಚುನಾವಣೆಯಲ್ಲೂ ನಾವು ಗೆಲ್ಲುತ್ತೇವೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಮಾಧ್ಯಮದವರೊಂದಿಗೆ ಸೋಮವಾರ ಮಾತನಾಡಿ, ‘ಮೀಸಲಾತಿ ಕೇಳುವುದು ಎಲ್ಲರ ಹಕ್ಕು. ಆದರೆ, ಅದನ್ನು ಪರಿಶೀಲಿಸಿ ನಿಯಮದ ಪ್ರಕಾರ ಯಾರಿಗೆ ಕೊಡಬೇಕು ಎಂಬ ತೀರ್ಮಾನ ಸರ್ಕಾರ ತೆಗೆದುಕೊಳ್ಳುತ್ತದೆ’ ಎಂದರು.

‘ಮೆಕ್ಕೆಜೋಳದ ಖರೀದಿ ಕೇಂದ್ರದ ಯಾವುದೇ ಪ್ರಸ್ತಾವ ಇಲ್ಲ. ಪಡಿತರ ವ್ಯವಸ್ಥೆಯಲ್ಲಿ ಬರದೇ ಇರುವುದರಿಂದ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ. ಹಾಗಾಗಿ ಸದ್ಯಕ್ಕೆ ಆ ಚಿಂತನೆ ಇಲ್ಲ’ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಬಿಪಿಎಲ್‌ ಕಾರ್ಡ್ ರದ್ದತಿ ಬಗ್ಗೆ ಮಾತನಾಡಿ, ‘ಸಚಿವ ಉಮೇಶ್‌ ಕತ್ತಿ ಹೇಳಿಕೆ ನೋಡಿದೆ, ಕೆಲವು ಕಡೆ ಹೆಚ್ಚುವರಿ ಬಿಪಿಎಲ್‌ ಕಾರ್ಡ್‌ಗಳಿರುವುದು ಗಮನಕ್ಕೆ ಬಂದಿದೆ. ಅಂಥ ಅನಧಿಕೃತ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಲು ಕ್ರಮ ಕೈಗೊಳ್ಳಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT