ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಅಭ್ಯುದಯಕ್ಕಾಗಿ ಬಿಜೆಪಿ ಬೆಂಬಲಿಸಿ

ಶಿಗ್ಗಾವಿ: ಬಿಜೆಪಿ ಪ್ರಚಾರ ಸಭೆಯಲ್ಲಿ ಅಭ್ಯರ್ಥಿ ಪ್ರದೀಪ ಶೆಟ್ಟರ್ ಮನವಿ
Last Updated 4 ಡಿಸೆಂಬರ್ 2021, 2:17 IST
ಅಕ್ಷರ ಗಾತ್ರ

ಶಿಗ್ಗಾವಿ: ಗ್ರಾಮೀಣ ಪ್ರದೇಶದ ಅಭ್ಯುದಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬೆಂಬಲಿಸಿರಿ ಎಂದು ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್ ಮನವಿ ಮಾಡಿದರು.

ಪಟ್ಟಣದಲ್ಲಿ ಶುಕ್ರವಾರ ನಡೆದ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿ, ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಪರ್ವ ನಡೆದಿದೆ. ಗ್ರಾಮೀಣ ಅಭಿವೃದ್ಧಿಯಲ್ಲಿ ದೇಶದ ಅಭಿವೃದ್ಧಿ ಕಾಣಲು ಸಾಧ್ಯವಿದೆ ಎಂಬ ತತ್ವದಡಿಯಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿಗಳ ಅಭಿವೃದ್ಧಿ ಕಾರ್ಯ ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಿದೆ. ರಾಜ್ಯದ ಪ್ರತಿ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಮುಂದಾಗಿದೆ. ಕ್ಷೇತ್ರಕ್ಕೆ ₹1.5 ಕೋಟಿ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಸಹಕಾರ ನೀಡಿರುವುದಾಗಿ ಹೇಳಿದರು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಮಾತನಾಡಿ, ವ್ಯಕ್ತಿಗಿಂತ ಪಕ್ಷ ಮುಖ್ಯ ಪಕ್ಷಕ್ಕಿಂತ ದೇಶ ಮುಖ್ಯ ಎಂಬ ತತ್ವದಡಿಯಲ್ಲಿ ಬಿಜೆಪಿ ಪಕ್ಷ ಮುನ್ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲವು ನೀಡಬೇಕು ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಡಳಿತಕ್ಕೆ ಬಂದಾಕ್ಷಣ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಮೂಲಕ ಶೈಕ್ಷಣಿಕ ಸುಧಾರಣೆಗೆ ಆದ್ಯತೆ ನೀಡಿದ್ದಾರೆ. ಬಿಜೆಪಿ ಸರ್ಕಾರ ಹತ್ತಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ ಎಂದರು.

ಮಾಜಿ ಸಂಸದ ಮಂಜುನಾಥ ಕುನ್ನೂರ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಶಿವಾನಂದ ಮ್ಯಾಗೇರಿ ಮಾತನಾಡಿದರು. ರಾಜ್ಯ ಯುವ ಮೋರ್ಚಾ ಘಟದ ಸದಸ್ಯ ನರಹರಿ ಕಟ್ಟಿ, ಪುರಸಭೆ ಅಧ್ಯಕ್ಷ ಶ್ರೀಕಾಂತ ಬುಳ್ಳಕ್ಕನವರ, ಮುಖಂಡರಾದ ದೇವಣ್ಣ ಚಾಕಲಬ್ಬಿ, ಬಸನಗೌಡ ಮೇಗಳಮನಿ, ಶೈಲಾ ಮುಂದಿನಮನಿ, ಶೋಭಾ ನಿಸೀಮಗೌಡ್ರ, ರುದ್ರಗೌಡ ಪಾಟೀಲ, ಶಿವಾನಂದ ರಾಮಗೇರಿ, ರವಿಕೊಡವಕ್ಕಲಿಗೇರ, ಹರ್ಜಪ್ಪ ಲಮಾಣಿ, ಡಾ.ಮಲ್ಲೇಶಪ್ಪ ಹರಿಜನ, ಬಸವರಾಜ ನಾರಾಯಣಪುರ, ಎಪಿಎಂಸಿ ಅಧ್ಯಕ್ಷ ಸಂಗಪ್ಪ ಕೊಡಲ, ರೇಣುಕಗೌಡ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT