ಭಾನುವಾರ, ಮೇ 31, 2020
27 °C

ಬಿಜೆಪಿ ಸಂಘಟನಾತ್ಮಕ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಜಿಲ್ಲೆಯ ಪಥಮ ಸಂಘಟನಾತ್ಮಕ ಸಭೆ ಶನಿವಾರ ನಡೆಯಿತು.
ಜಿಲ್ಲೆಯಲ್ಲಿರುವ 9 ಸಂಘಟನಾತ್ಮಕ ಮಂಡಳಗಳ ಅಧ್ಯಕ್ಷರಿಗೆ ತಾಲ್ಲೂಕು ಮಟ್ಟದಲ್ಲಿ ಸಂಘಟನೆಯನ್ನು ಮಾಡುವುದರ ಕುರಿತು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಜಯತೀರ್ಥ ಕಟ್ಟಿಯವರು ಮಾರ್ಗದರ್ಶನ ಮಾಡಿದರು.

ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ಕೋವಿಡ್– 19 ಕುರಿತಂತೆ 2 ತಿಂಗಳು  ಅವಿಶ್ರಾಂತವಾಗಿ ಸೇವಾ ಚಟುವಟಿಕೆಗಳಲ್ಲಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಪಕ್ಷದ ನಾಯಕರಿಗೆ ಧನ್ಯವಾದಗಳನ್ನು ತಿಳಿಸಿದರು.

ಮಾಜಿ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ ಮುಳ್ಳೂರ, ಕೃಷ್ಣಾ ಈಳಗೇರ, ಶಶಿಧರ ಹೊಸಳ್ಳಿ ಮತ್ತು 9 ಮಂಡಳ ಅಧ್ಯಕ್ಷರು ಪಾಲ್ಗೊಂಡಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು